ಬೆಂಗಳೂರು: ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸೋ ಸಂಬಂಧ ನಿಗದಿ ಪಡಿಸಲಾಗಿದ್ದಂತ ಸಭೆಯ ಬಗ್ಗೆ, ಕುರುಬರನ್ನು ಎಸ್ ಟಿ ಮೀಸಲಾತಿಯ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿದ್ದರು. ಈ ಹೇಳಿಕೆಯ ವಿಚಾರವಾಗಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕುರುಬರ ಎಸ್ ಟಿ ಮೀಸಲಾತಿ ಬಗ್ಗೆ ಮಾತನಾಡಿದ್ದಕ್ಕಾಗಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಛಲವಾದಿ ನಾರಾಯಣಸ್ವಾಮಿ, ಮೈಸೂರಿನ ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀವತ್ಸ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 353(2) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಕುರುಬ ಸಮುದಾಯದ ಮುಖಂಡ ಸಿದ್ದಣ್ಣ ತೇಜಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಈ ಎಫ್ಐಆರ್ ದಾಖಲಾಗಿದೆ.








