ಮೈಸೂರು : ರಾಜ್ಯದಲ್ಲಿ ಕಾಡಾನೆ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಇದೇ ಮೊದಲ ಬಾರಿಗೆ ಆನೆ ಕಾರ್ಯಪಡೆ ರಚಿಸಲಾಗಿದ್ದು, ಇಂದು ಚಾಲನೆ ನೀಡಲಾಗುತ್ತಿದೆ.
ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಇಂದು ರಾಜ್ಯದ ಮೊದಲ ಆನೆ ಕಾರ್ಯಪಡೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಪಡೆ ರಚನೆಗೆ 2024-25ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ 10 ಕೋಟಿ ರು. ಅನುದಾನ ನೀಡಲಾಗಿದೆ.
ಕಾರ್ಯಪಡೆಯು ಕಾಡಾನೆ ಹಾವಳಿ ಇರುವಲ್ಲಿ ಗಸ್ತು ತಿರುಗಲಿದ್ದು, ಜನ ವಸತಿ ಮತ್ತು ಕೃಷಿ ಪ್ರದೇಶಗಳಲ್ಲಿ ಆನೆಗಳ ಚಲನವಲನಗಳನ್ನು ಗುರುತಿಸಿ ಕೂಡಲೇ ಅವುಗಳನ್ನು ಅರಣ್ಯಕ್ಕೆ ಹಿಮ್ಮೆಟ್ಟಿಸುವ ಕೆಲಸ ಮಾಡಲಿದೆ.