ಬೆಂಗಳೂರು: ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸೋ ಕಾಲ ಸಮೀಪಿಸಿದೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲು ಸೆಪ್ಟೆಂಬರ್.16, 2025ರಂದು ಸಭೆಯನ್ನು ಸರ್ಕಾರ ಕರೆಯಲಾಗಿದೆ.
ಈ ಕುರಿತಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸಭಾ ಸೂಚನ ಪತ್ರವನ್ನು ಹೊರಡಿಸಿದ್ದು, ಸರ್ಕಾರದ ಕಾರ್ಯದರ್ಶಿಗಳು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:16.09.2025 ರಂದು ಅಪರಾಹ್ನ 3.00 ಗಂಟೆಗೆ ಕೊಠಡಿ ಸಂಖ್ಯೆ:331, 3ನೇ ಮಹಡಿ, ಬಹುಮಹಡಿಗಳ ಕಟ್ಟಡ ಇಲ್ಲಿ ಈ ಕೆಳಕಂಡ ವಿಷಯಗಳ ಕುರಿತು ಚರ್ಚಿಸಲು ಸಭೆಯನ್ನು ಏರ್ಪಡಿಸಲಾಗಿದೆ ಎಂದಿದ್ದಾರೆ.
1.ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಕುರಿತು.
2.Inclusion of Kuruba community of Bidar. Kalaburgi and Yadgiri districts in Karnataka as Synonym of Gonda community of Karnataka State.
ಈ ಮೇಲ್ಕಂಡ ಸಭೆಗೆ ಅಗತ್ಯ ಮಾಹಿತಿ/ದಾಖಲೆಗಳೊಂದಿಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರವು ಕುರುಬ ಸಮುದಾಯವನ್ನು ಎಸ್ ಟಿ ವರ್ಗಕ್ಕೆ ಸೇರಿಸೋದಕ್ಕೆ ಮುಂದಾಗಿದೆ.