ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ / ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ 2025, ಆಗಸ್ಟ್ 22 ರಂದು ಮಾಧ್ಯಮಗಳಿಗೆ ಸುದ್ದಿ ಬಿಡುಗಡೆ ಮಾಡಿ ಯಾವುದೇ ಜಾತಿ / ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ ಮತ್ತು ಸೂಚನೆಗಳು ಇದ್ದಲ್ಲಿ 7 ದಿನಗಳ ಒಳಗೆ ನೀಡಲು ಕೋರಲಾಗಿತ್ತು.
ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ ಸಲಹೆ / ಸೂಚನೆ ಮನವಿಗಳನ್ನು ನೀಡುವ ಅವಧಿಯನ್ನು 2025ರ ಸೆಪ್ಟೆಂಬರ್ 1ರ ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ / ಉಪಜಾತಿಗಳ ಬಗ್ಗೆ… pic.twitter.com/GDjCfDvxwC
— DIPR Karnataka (@KarnatakaVarthe) August 28, 2025
ಸಾರ್ವಜನಿಕರು ತಮ್ಮ ಸಲಹೆ / ಸೂಚನೆ / ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ, ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ 080-29506668 ಸಂಪರ್ಕಿಸಬಹುದು.