ಶಿವಮೊಗ್ಗ: ದಿನೇ ದಿನೇ ಆನ್ ಲೈನ್ ಗೇಮಿನ ಹುಚ್ಚಿಗೆ ಬೀಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಜೊತೆ ಜೊತೆಗೆ ಯುವಕರು ಆನ್ ಲೈನ್ ಗೇಮಿನಿಂದ ಆರ್ಥಿಕ ನಷ್ಟಕ್ಕೆ ಒಳಗಾಗಿ ಆತ್ಮಹತ್ಯೆಯಂತ ನಿರ್ಧಾರಕ್ಕೂ ಮುಂದಾಗುತ್ತಿದ್ದಾರೆ. ಇಂತಹ ಆಟಗಳಿಂದ ದೂರವಿರುವಂತೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರು ಯುವಕರಿಗೆ ಕಿವಿಮಾತು ಹೇಳಿದರು.
ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಕೆಲವು ದಿನಗಳಿಂದ ತಾಲ್ಲೂಕಿನಲ್ಲಿ ಎರಡು ಮೂರು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಬೇರೆಬೇರೆ ಕಾರಣಗಳಿದ್ದಾಗ್ಯೂ, ಆನ್‌ಲೈನ್ ಗೇಮ್‌ಗಳಲ್ಲಿ ಹಣ ಕಳೆದುಕೊಂಡಿದ್ದು ಸಹ ಎಲ್ಲೋ ಒಂದು ಕಡೆ ಲಿಂಕ್ ಆಗಿದೆ ಎಂದರು.
ಸಾಗರ ತಾಲ್ಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ಮುಂಗಾರು ಮಳೆ ಆರಂಭಗೊಂಡ ನಂತರ ಪ್ರವಾಸಿಗರ ಭೇಟಿ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಕುಡಿದು ವಾಹನ ಚಾಲನೆ ಪ್ರಕರಣಗಳು ವರದಿಯಾಗುತ್ತಿವೆ. ಕುಡಿದು ವಾಹನ ಚಲಾಯಿಸಬಾರದು. ಈ ಪ್ರಕರಣಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಚಾಲಕ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಕರ್ನಾಟಕ ಸರ್ಕಾರ ನಶೆಮುಕ್ತ ಕರ್ನಾಟಕ ಯೋಜನೆ ಜಾರಿಗೆ ತಂದಿದ್ದು ಸಾರ್ವಜನಿಕರು ಮಾದಕ ವಸ್ತು ಸರಬರಾಜು, ಮಾರಾಟ ಮಾಡುವುದನ್ನು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಸಾಗರ ನಗರವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ. ಶಾಸಕರ ಮಾರ್ಗದರ್ಶನದಲ್ಲಿ ಈಗಾಗಲೇ 56 ಸಿಸಿಟಿವಿಗಳನ್ನು ನಗರಸಭೆಯ ಜೊತೆಗೂಡಿ ಅಳವಡಿಸಲಾಗಿದೆ. ಸಾಗರ ನಗರದ ಪ್ರಮುಖ ಸೂಕ್ಷ್ಮ ಸ್ಥಳಗಳಲ್ಲಿನ ಸಾರ್ವಜನಿಕರ ಚಲನವಲನಗಳನ್ನು ಡಿವೈಎಸ್ಪಿ ಕಚೇರಿಯಲ್ಲೇ ಕುಳಿತು ವೀಕ್ಷಿಸುವ ವ್ಯವಸ್ಥೆ ಇದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಪೊಲೀಸ್ ಇಲಾಖೆ ಖಡಕ್ ಕ್ರಮವಹಿಸಲಿದೆ ಎಂಬುದಾಗಿ ಎಚ್ಚರಿಕೆ ನೀಡಿದರು.
BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್
BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಳಿತಲ್ಲೇ ಪ್ರಾಣ ಬಿಟ್ಟ 63 ವರ್ಷದ ವೃದ್ಧ