ಬೆಂಗಳೂರು : ಕಂದಾಯ ಇಲಾಖೆಯ ಎಲ್ಲಾ ವರ್ಗಾವಣೆಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ( state govt)  ಆದೇಶ ಹೊರಡಿಸಿದೆ.

ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಆರೋಗ್ಯ ಇಲಾಖೆಯ ವರ್ಗಾವಣೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದ್ದ ಸರ್ಕಾರ ಇದೀಗ ಕಂದಾಯ ಇಲಾಖೆಯ ಎಲ್ಲಾ ವರ್ಗಾವಣೆಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ಚುನಾವಣಾ ಆಯೋಗ ಮತದಾರರ ಪಟ್ಟಿಯ ನೋಂದಣಿ, ಪರಿಷ್ಕರಣಾ ಕಾರ್ಯ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ಪ್ರಕ್ರಿಯೆ ಮುಗಿಯುವವರೆಗೂ ಮತದಾರರ ನೋಂದಣಿ, ಪ್ರಕ್ರಿಯೆಯಲ್ಲಿ ತೊಡಗಿಕೊಂಡಿರುವ ಅಧಿಕಾರಿ/ ಸಿಬ್ಬಂದಿಗಳ ವರ್ಗಾವಣೆ ಮಾಡದಂತೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.  ಈ ಹಿನ್ನೆಲೆ ಉಪ ತಹಶೀಲ್ದಾರ್, ಶಿರಸ್ತೇದಾರ್, ಕಂದಾಯ ನಿರೀಕ್ಷಕರು/ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರುಗಳ ಯಾವುದೇ ವರ್ಗಾವಣೆ ಮತ್ತು ನಿಯೋಜನೆ/ ಓಓಡಿ ಪ್ರಸ್ತಾವನೆಗಳನ್ನು ಕಡತದಲ್ಲಿ ಜನವರಿ-2023ರ ಎರಡನೇ ವಾರದವರೆಗೆ ವಿಲೇ ಇಡಲು ಸೂಚನೆ ನೀಡಿದ್ದಾರೆ. ಸರ್ಕಾರದ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ಕೆ. ಲತಾ  ಆದೇಶದಲ್ಲಿ ತಿಳಿಸಿದ್ದಾರೆ.

ಉದ್ಯೋಗಾಂಕ್ಷಿಗಳೇ ನಿಮಗಿದು ಲಾಸ್ಟ್ ಚಾನ್ಸ್ ; ‘DRDO’ದಲ್ಲಿ ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

Share.
Exit mobile version