ಪತ್ರಕರ್ತರ ಮಾಸಾಶನ ನಿಯಮ ಸರಳೀಕರಣಕ್ಕೆ ಕ್ರಮ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

ಬೆಂಗಳೂರು: ನಿವೃತ್ತ ಪತ್ರಕರ್ತರ ಮಾಸಾಶನದಲ್ಲಿರುವ ಕಠಿಣ ಷರತ್ತುಗಳನ್ನು ಸರಳೀಕರಣ ಮಾಡಲು ಕೂಡಲೇ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ವಿಧಾನಸೌಧದಲ್ಲಿ ಪ್ರಭಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಚರ್ಚಿಸಿತು. ಅರ್ಹ ಪತ್ರಕರ್ತರಿಗೆ ಕೂಡಲೇ ಮಾಸಾಶನ ಸಿಗುವಂತಾಗಬೇಕು ಎನ್ನುವುದು ಸರ್ಕಾರದ ಕಾಳಜಿಯಾಗಿದೆ. ಈ ನಿಟ್ಟಿನಲ್ಲಿ ಸಿಎಂ ಗಮನಕ್ಕೆ ತಂದಿದ್ದು, ವಾರ್ತಾ ಇಲಾಖೆ ಆಯುಕ್ತರ ಜೊತೆಗೆ ಮಾತನಾಡಲಾಗಿದೆ. … Continue reading ಪತ್ರಕರ್ತರ ಮಾಸಾಶನ ನಿಯಮ ಸರಳೀಕರಣಕ್ಕೆ ಕ್ರಮ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್