Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮುಖ್ಯಮಂತ್ರಿ ಕುರ್ಚಿ ಕಾದಾಟದ ನಡುವೆ ಕೆಟ್ಟು ನಿಂತ ಸಿಎಂ ಸಿದ್ದರಾಮಯ್ಯ ಗಡಿಯಾರ!

01/05/2026 3:12 PM

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

01/05/2026 3:11 PM

ಬೌದ್ಧ ಧರ್ಮ ಬೋಧನೆಯ ತಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಲು ಕ್ರಮ: ಸಚಿವ ಶಿವರಾಜ ತಂಗಡಗಿ

01/05/2026 3:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೌದ್ಧ ಧರ್ಮ ಬೋಧನೆಯ ತಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಲು ಕ್ರಮ: ಸಚಿವ ಶಿವರಾಜ ತಂಗಡಗಿ
KARNATAKA

ಬೌದ್ಧ ಧರ್ಮ ಬೋಧನೆಯ ತಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಲು ಕ್ರಮ: ಸಚಿವ ಶಿವರಾಜ ತಂಗಡಗಿ

By kannadanewsnow0901/05/2026 3:07 PM

ಬೆಂಗಳೂರು: ಬೌದ್ಧ ಧರ್ಮದ ಪವಿತ್ರ ಗ್ರಂಥಗಳೆಂದು ಪರಿಗಣಿಸಲಾಗುವ ತಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿಸಿ ಪ್ರಕಟಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಸದಾಶಿವನಗರದಲ್ಲಿರುವ ನಾಗಸೇನಾ ಬುದ್ಧ ವಿಹಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಭಗವಾನ್ ಬುದ್ಧ ಜಯಂತಿಯನ್ನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು .

ಭಗವಾನ್ ಬುದ್ಧರ ಬೋಧನೆಗಳು ಹಿಂದೆoದಿಗಿಂತಲೂ ಈಗ ಹೆಚ್ಚು ಪ್ರಸ್ತುತವಾಗಿದೆ, ಮನುಷ್ಯ ಅತಿಯಾದ ಆಸೆಗಳಲ್ಲಿ ಹಾಗೂ ಹಿಂಸೆಯಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ಭಗವಾನ್ ಬುದ್ಧರು ಬೋಧಿಸಿದ ಶಾಂತಿಯ ತತ್ವ ಹಾಗೂ ಅವರ ಮನುಷ್ಯ ಕರುಣೆ ಅತ್ಯಂತ ಮುಖ್ಯವಾಗಿದೆ. ಆ ತತ್ವಗಳನ್ನು ಪುಸ್ತಕಗಳ ಮೂಲಕ ಇಂದಿನ ವಿದ್ಯಾರ್ಥಿಗಳಿಗೆ ಹಾಗೂ ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

ಇದಲ್ಲದೆ ಬೌದ್ಧರ ಸ್ಮಾರಕಗಳ ರಕ್ಷಣೆ ಮತ್ತು ಪುನರ್ ನಿರ್ಮಾಣದ ಕೆಲಸ ಅತ್ಯಂತ ಮುಖ್ಯವಾದದ್ದು , ನಮ್ಮ ಸರ್ಕಾರ ಈ ಕೆಲಸವನ್ನು ಈಗಾಗಲೇ ಕೈಗೆತ್ತಿಕೊಂಡು ಸನ್ನತಿಯಿಂದ ಆರಂಭ ಮಾಡಿದೆ. ಅದನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

ಬುದ್ಧ, ಬಸವ ಹಾಗೂ ಅಂಬೇಡ್ಕರ್ ಈ ಮೂರು ಮಹಾಪುರುಷರ ಚಿಂತನೆ ಒಂದೇ ಆಗಿದೆ ,ಅವರನ್ನು ಅನುಸರಿಸಿದರೆ ಮನುಷ್ಯ ಜೀವನ ಸಾರ್ಥಕತೆ ಪಡೆಯುತ್ತದೆ ಎಂದರು.

ಯಾವುದೇ ಮಹಾಪುರುಷರನ್ನ ಒಂದೊಂದು ಸಮುದಾಯಕ್ಕೆ ಸೀಮಿತ ಮಾಡುವ ಕ್ರಿಯೆ ಒಳ್ಳೆಯದಲ್ಲ ,ಈ ಮಹಾನ್ ಪುರುಷರು ಯಾವುದೇ ಒಂದು ಜಾತಿ ವರ್ಗ ಸಮುದಾಯಕ್ಕೆ ಸೇರಿದವರಲ್ಲ ,ಅವರು ಇಡೀ ಪ್ರಪಂಚಕ್ಕೆ ಸನ್ಮಾರ್ಗ ಬೋಧಿಸಿದವರು ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ಭಾರತೀಯ ಬೌದ್ಧ ಮಹಾಸಭಾದಶ್ರೀ ಬೋಧಿದತ್ತ ಭಂತೇಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು.

ದಕ್ಷಿಣ ಭಾರತ ಬುದ್ಧ ಸಂಘದ ತಸುತೇಸಮ್ಮ ಜಥೋನೋ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೆ ಮಂಜುನಾಥ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಡಾ. ಬಿ ಎಸ್ ಮಂಜುನಾಥ ಸ್ವಾಮಿ ಸಮಾರಂಭದಲ್ಲಿ ಭಾಗಿಯಾಗಿದ್ದರು.

ನಾಗಸೇನ ಬುದ್ಧ ವಿಹಾರದ ಅಧ್ಯಕ್ಷ ಡಾ. ಎಂ ವೆಂಕಟಸ್ವಾಮಿ., ಸಾಮಾಜಿಕ ಹೋರಾಟಗಾರ ಎನ್.ಮೂರ್ತಿ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡಾ. ವಡ್ಡಗೆರೆ ನಾಗರಾಜಯ್ಯ ಹಾಗೂ ಪ್ರೊ. ಎಂ. ವಿ .ಉಷಾದೇವಿ ಅವರು ಭಗವಾನ್ ಬುದ್ಧರನ್ನು ಕುರಿತಂತೆ ಉಪನ್ಯಾಸ ನೀಡಿದರು. ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಬಲವಂತರಾವ್ ಪಾಟೀಲ್ ಹಾಗೂ ಶ್ರೀ ಅಶೋಕ್ ಚಲವಾದಿ ಹಾಜರಿದ್ದರು.

ವಿವಿಧ ಬೌದ್ಧ ಸಂಘಗಳ ಪ್ರತಿನಿಧಿಗಳು ಹಾಗೂ ಮುಂಡಗೋಡಿನ ಬೌದ್ಧ ಭಿಕ್ಕುಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.

Share. Facebook Twitter LinkedIn WhatsApp Email

Related Posts

BREAKING : ಮುಖ್ಯಮಂತ್ರಿ ಕುರ್ಚಿ ಕಾದಾಟದ ನಡುವೆ ಕೆಟ್ಟು ನಿಂತ ಸಿಎಂ ಸಿದ್ದರಾಮಯ್ಯ ಗಡಿಯಾರ!

01/05/2026 3:12 PM1 Min Read

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

01/05/2026 3:11 PM1 Min Read

BREAKING : ಚಾಮರಾಜನಗರದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ‘KSRTC’ ಬಸ್ : 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!

01/05/2026 1:53 PM1 Min Read
Recent News

BREAKING : ಮುಖ್ಯಮಂತ್ರಿ ಕುರ್ಚಿ ಕಾದಾಟದ ನಡುವೆ ಕೆಟ್ಟು ನಿಂತ ಸಿಎಂ ಸಿದ್ದರಾಮಯ್ಯ ಗಡಿಯಾರ!

01/05/2026 3:12 PM

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

01/05/2026 3:11 PM

ಬೌದ್ಧ ಧರ್ಮ ಬೋಧನೆಯ ತಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಲು ಕ್ರಮ: ಸಚಿವ ಶಿವರಾಜ ತಂಗಡಗಿ

01/05/2026 3:07 PM

BREAKING : ಚಾಮರಾಜನಗರದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ‘KSRTC’ ಬಸ್ : 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!

01/05/2026 1:53 PM
State News
KARNATAKA

BREAKING : ಮುಖ್ಯಮಂತ್ರಿ ಕುರ್ಚಿ ಕಾದಾಟದ ನಡುವೆ ಕೆಟ್ಟು ನಿಂತ ಸಿಎಂ ಸಿದ್ದರಾಮಯ್ಯ ಗಡಿಯಾರ!

By kannadanewsnow0501/05/2026 3:12 PM KARNATAKA 1 Min Read

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಭಾರಿ ಪೈಪೋಟಿ ನಡೆಯುತ್ತಿದ್ದು ಒಂದು ಕಡೆ ಸಿಎಂ ಸಿದ್ದರಾಮಯ್ಯ ಬೆಂಬಲಿಗರು…

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

01/05/2026 3:11 PM

ಬೌದ್ಧ ಧರ್ಮ ಬೋಧನೆಯ ತಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಲು ಕ್ರಮ: ಸಚಿವ ಶಿವರಾಜ ತಂಗಡಗಿ

01/05/2026 3:07 PM

BREAKING : ಚಾಮರಾಜನಗರದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ‘KSRTC’ ಬಸ್ : 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!

01/05/2026 1:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.