Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರು: ಮಾಜಿ ಕಾರ್ಪೊರೇಟರ್ ವಿರುದ್ಧ ವಂಚನೆ ಆರೋಪ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ!

10/04/2026 3:31 PM

BIG NEWS : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​ : ಆದ್ರೆ ಈ ಷರತ್ತುಗಳು ಅನ್ವಯ

10/04/2026 3:27 PM

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖ್ಯಾತ ನಿರ್ದೇಶಕ ರಂಜಿತ್‌ಗೆ ಜಾಮೀನು ಮಂಜೂರು | Filmmaker Ranjith

10/04/2026 3:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಿಂದ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಸುವ್ಯವಸ್ಥಿತ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
KARNATAKA

ಕರ್ನಾಟಕದಿಂದ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಸುವ್ಯವಸ್ಥಿತ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

By kannadanewsnow5717/07/2025 7:43 AM

ರಾಯಚೂರ : ಕರ್ನಾಟಕ ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮವಹಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು.

ಜುಲೈ 15ರಂದು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿ ಅವರ ದರ್ಶನದ ಪಡೆದು, ಮಂತ್ರಾಲಯದ ಕರ್ನಾಟಕ ಛತ್ರದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ನಿರ್ಮಾಣ ಮಾಡಿರುವ ನೂತನ ಹಾಗೂ ಹಳೆ ಕಟ್ಟಡಗಳ ಪರಿಶೀಲನೆ ನಡೆಸಿ ಕರ್ನಾಟಕ ರಾಜ್ಯ ವಸತಿ ಗೃಹ ಕಟ್ಟಡದ ಸಭಾಂಗಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮಂತ್ರಾಲಯಕ್ಕೆ ಪ್ರತಿ ದಿನ ಅಂದಾಜು 200 ಬಸ್ಸಗಳು ರಾಜ್ಯದ ಬೇರೆ ಬೇರೆ ಭಾಗಗಳಿಂದ ಬರುತ್ತವೆ. ರೈಲಿನ ಮೂಲಕವು ಜನರು ಮಂತ್ರಾಲಯಕ್ಕೆ ಬರುತ್ತಾರೆ. ಆಂಧ್ರಕ್ಕೆ ಹೋಲಿಸಿದರೆ ಶೇ.60ರಷ್ಟು ಜನರು ಕರ್ನಾಟಕ ರಾಜ್ಯದಿಂದಲೇ ಮಂತ್ರಾಲಯಕ್ಕೆ ಆಗಮಿಸುತ್ತಾರೆ. ಈ ಬಗ್ಗೆ ಮಂತ್ರಾಲಯದ ಸ್ವಾಮೀಜಿ ಅವರೊಂದಿಗೆ ಚರ್ಚಿಸಿದಾಗ, ಕರ್ನಾಟಕದಿಂದ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ವಸತಿ ಗೃಹಗಳ ನಿರ್ಮಾಣಕ್ಕೆ ಸೂಕ್ತವಾದ ಜಾಗದ ವ್ಯವಸ್ಥೆ ಮಾಡಿಕೊಡುವುದಾಗಿ ಸ್ವಾಮೀಜಿ ಅವರು ಮಾತುಕೊಟ್ಟಿದ್ದಾರೆ ಎಂದು ಸಚಿವರು ತಿಳಿಸಿದರು.

ಮಂತ್ರಾಲಯದಲ್ಲಿ ಈಗಿರುವ ಕರ್ನಾಟಕ ರಾಜ್ಯ ವಸತಿ ಗೃಹ ಕಟ್ಟಡದ ಕಳಪೆ ಕಾಮಗಾರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಕಳಪೆ ಕಾಮಗಾರಿ ನಡೆದಿದೆ ಎಂದು ಲೋಕಾಯುಕ್ತರಿಂದ ಸಾಬೀತಾದಲ್ಲಿ ಸಂಬAಧಿಸಿದ ಗುತ್ತಿಗೆದಾರರಿಂದಲೇ ಕಟ್ಟಡದ ದುರಸ್ತಿ ಮಾಡಿಸಲಾಗುವುದು. ಇಲ್ಲವಾದಲ್ಲಿ ಕಟ್ಟಡದಲ್ಲಿನ ನೂನ್ಯತೆಗಳ ಬಗ್ಗೆ ಪರಿಶೀಲಿಸಿ ಮಾಸ್ಟರ್ ಪ್ಲಾನ್ ರೂಪಿಸಿ ಕಟ್ಟಡವನ್ನು ಸರಿಪಡಿಸಲಾಗುವುದು ಎಂದು ಸಚಿವರು ಹೇಳಿದರು.

ಆನಲೈನ್ ವ್ಯವಸ್ಥೆಗೆ ಕ್ರಮ

ಧಾರ್ಮಿಕ ದತ್ತಿ ಇಲಾಖೆಯಿಂದ ಮಂತ್ರಾಲಯದಲ್ಲಿ ನಿರ್ಮಾಣ ಮಾಡಿರುವ ಕರ್ನಾಟಕ ರಾಜ್ಯದ ವಸತಿ ಗೃಹದಲ್ಲಿ ಒಟ್ಟು 50 ಕೋಣೆಗಳಿವೆ. ಇವುಗಳನ್ನು ಕರ್ನಾಟಕದಿಂದ ಬರುವ ಭಕ್ತರಿಗೆ ಮೀಸಲಿರಿಸಿದೆ. ತಲಾ ನಾಲ್ಕು ಜನರು 12 ಗಂಟೆ ಸಮಯ ವಾಸ್ತವ್ಯ ಮಾಡಲು 500 ರೂಪಾಯಿ ದರ ನಿಗದಿಪಡಿಸಲಾಗಿದೆ. 12 ಗಂಟೆ ಮೀರಿದಾಗ 1000 ರೂ. ದರ ನಿಗದಿಪಡಿಸಲಾಗುತ್ತದೆ. ಒಟ್ಟು 50 ರೂಮುಗಳ ಪೈಕಿ 30 ರೂಮುಗಳನ್ನು ಆನಲೈನ್ ಮೂಲಕ ಹಾಗೂ ಇನ್ನುಳಿದ 20 ರೂಮುಗಳನ್ನು ನೇರವಾಗಿ ಹಣ ಪಾವತಿಸಿ ಬುಕ್ಕಿಂಗ್ ಮಾಡುವ ವ್ಯವಸ್ಥೆಗೆ ಕ್ರಮ ವಹಿಸುವುದಾಗಿ ಸಚಿವರು ತಿಳಿಸಿದರು.

ಟೂರಿಸಂ ಇಲಾಖೆಗೆ ಉಸ್ತುವಾರಿ

ಕಲ್ಯಾಣ ಮಂಟಪ, ಛತ್ರ, ವಸತಿ ಗೃಹಗಳ ನಿರ್ಮಾಣ ಪ್ರಕರಣವು ನ್ಯಾಯಾಲಯದ ಅಂಗಳದಲ್ಲಿರುವುದರಿAದ ಕಟ್ಟಡದ ದುರಸ್ತಿಗೆ ತೊಡಕಾಗಿ ಪರಿಣಮಿಸಿದೆ. ಮಂತ್ರಾಲಯ, ಶ್ರೀಶೈಲಂ, ತಿರುಪತಿ ಸೇರಿದಂತೆ ನಾನಾ ಕಡೆಗಳಲ್ಲಿ ವಿವಾದದಿಂದ ಕೂಡಿರುವ ಜಾಗದ ಸಮಸ್ಯೆಯನ್ನು ಬೇಗನೆ ಇತ್ಯರ್ಥಪಡಿಸಬೇಕು ಎಂದು ಖುದ್ದು ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಆಯಾ ದತ್ತಿ ಸಂಸ್ಥೆಗಳಿಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ ಸಚಿವರು, ಉತ್ತಮ ದರ್ಜೆಯ ನಿರ್ವಹಣೆಗಾಗಿ ಮಂತ್ರಾಲಯದಲ್ಲಿರುವ ಕರ್ನಾಟಕ ವಸತಿ ಗೃಹಗಳ ಕಟ್ಟಡದ ನಿರ್ಹಹಣೆಯ ಉಸ್ತುವಾರಿಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸುವ ಬಗ್ಗೆ ಪ್ರವಾಸೋದ್ಯಮ ಸಚಿವರಾದ ಹೆಚ್ ಕೆ ಪಾಟೀಲ ಅವರೊಂದಿಗೆ ಮಾತನಾಡುವುದಾಗಿ ಸಚಿವರು ತಿಳಿಸಿದರು.

ಈ ವೇಳೆ ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾದ ವೆಂಕಟೇಶ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಕಿಶೋರ್ ಕುಮಾರ ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣ ಶಾವಂತಗೇರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎಸ್.ಚAದ್ರಶೇಖರ, ಕರ್ನಾಟಕ ವಸತಿ ಗೃಹ ಕಟ್ಟಡದ ಅಧಿಕಾರಿ ಆಂಜನೇಯ ಸೇರಿದಂತೆ ಇನ್ನೀತರರು ಇದ್ದರು.

Steps will be taken to construct well-organized residential houses in Mantralaya for the convenience of devotees coming from Karnataka: Minister Ramalinga Reddy
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು: ಮಾಜಿ ಕಾರ್ಪೊರೇಟರ್ ವಿರುದ್ಧ ವಂಚನೆ ಆರೋಪ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ!

10/04/2026 3:31 PM1 Min Read

BIG NEWS : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​ : ಆದ್ರೆ ಈ ಷರತ್ತುಗಳು ಅನ್ವಯ

10/04/2026 3:27 PM1 Min Read

ತನ್ನ ಪ್ರಾಣ ಕೊಟ್ಟು ಇಬ್ಬರಿಗೆ ಮರುಜನ್ಮ ನೀಡಿದ ಮಹಾದಾನಿ: ಈ ಹುಲಿಕಲ್ ಘಾಟಿಯ ರಿಯಲ್ ಹೀರೋ ಕಥೆ ಓದಿ!

10/04/2026 3:22 PM2 Mins Read
Recent News

BREAKING: ಬೆಂಗಳೂರು: ಮಾಜಿ ಕಾರ್ಪೊರೇಟರ್ ವಿರುದ್ಧ ವಂಚನೆ ಆರೋಪ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ!

10/04/2026 3:31 PM

BIG NEWS : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​ : ಆದ್ರೆ ಈ ಷರತ್ತುಗಳು ಅನ್ವಯ

10/04/2026 3:27 PM

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖ್ಯಾತ ನಿರ್ದೇಶಕ ರಂಜಿತ್‌ಗೆ ಜಾಮೀನು ಮಂಜೂರು | Filmmaker Ranjith

10/04/2026 3:24 PM

ತನ್ನ ಪ್ರಾಣ ಕೊಟ್ಟು ಇಬ್ಬರಿಗೆ ಮರುಜನ್ಮ ನೀಡಿದ ಮಹಾದಾನಿ: ಈ ಹುಲಿಕಲ್ ಘಾಟಿಯ ರಿಯಲ್ ಹೀರೋ ಕಥೆ ಓದಿ!

10/04/2026 3:22 PM
State News
KARNATAKA

BREAKING: ಬೆಂಗಳೂರು: ಮಾಜಿ ಕಾರ್ಪೊರೇಟರ್ ವಿರುದ್ಧ ವಂಚನೆ ಆರೋಪ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ!

By kannadanewsnow0910/04/2026 3:31 PM KARNATAKA 1 Min Read

ಬೆಂಗಳೂರು: ಮಾಜಿ ಕಾರ್ಪೊರೇಟರ್ ಒಬ್ಬರಿಂದ ತನಗೆ ವಂಚನೆಯಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ…

BIG NEWS : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​ : ಆದ್ರೆ ಈ ಷರತ್ತುಗಳು ಅನ್ವಯ

10/04/2026 3:27 PM

ತನ್ನ ಪ್ರಾಣ ಕೊಟ್ಟು ಇಬ್ಬರಿಗೆ ಮರುಜನ್ಮ ನೀಡಿದ ಮಹಾದಾನಿ: ಈ ಹುಲಿಕಲ್ ಘಾಟಿಯ ರಿಯಲ್ ಹೀರೋ ಕಥೆ ಓದಿ!

10/04/2026 3:22 PM

SHOCKING: ವಾದ ಮಂಡಿಸುತ್ತಿದ್ದಾಗಲೇ ಹೃದಯಾಘಾತದಿಂದ ವಕೀಲ ಸಾವು

10/04/2026 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.