ಬೆಂಗಳೂರು; ಕಾಡುಗೊಲ್ಲ ಸಮುದಾಯದವರಿಗೆ ಕಾಡುಗೊಲ್ಲ ಎಂಬುದಾಗಿ ಜಾತಿ ಪ್ರಮಾಣಪತ್ರ ವಿತರಿಸುವಲ್ಲಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿರವಾಜ ತಂಡರಿಗೆ ಹೇಳಿದ್ದಾರೆ.
ತುಮಕೂರು, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ವಿತರಿಸುವಲ್ಲಿ ಸಮಸ್ಯೆಗಳಾಗುತ್ತಿದ್ದು, ಅವುಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ ತಂಗಡಗಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ತುಮಕೂರು, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ವಿತರಿಸುವಲ್ಲಿ ಸಮಸ್ಯೆಗಳಾಗುತ್ತಿದ್ದು, ಅವುಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ ತಂಗಡಗಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.… pic.twitter.com/ilLgkYYwLP
— DIPR Karnataka (@KarnatakaVarthe) March 5, 2025
ಅಂದಹಾಗೇ ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಕಾಡುಗೊಲ್ಲ ಸಮುದಾಯದವರಿಗೆ ಕೇವಲ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಜಾತಿ ಪ್ರಮಾಣ ಪತ್ರವನ್ನು ನೀಡುತ್ತಿದ್ದು, ರಾಜ್ಯದ ಇತರೆ ಜಿಲ್ಲೆಗಳಲ್ಲೂ ಜಾತಿ ಪ್ರಮಾಣ ಪತ್ರವನ್ನು ವಿತರಿಸುವಂತೆ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಲ್ಲಿ ಹೆಚ್ ಸಿ ಬಾಲಕೃಷ್ಣ ಅವರು ಮನವಿ ಮಾಡಿದ್ದರು. ಈ ಮನವಿಗೆ ಮೇಲಿನಂತೆ ಸಚಿವರು ಉತ್ತರಿಸಿದ್ದಾರೆ.
ತುಮಕೂರಲ್ಲಿ ಬೋನಿಗೆ ಬಿದ್ದ ‘ಚಿರತೆ’ ಸಾವಿನ ಬಗ್ಗೆ ತನಿಖೆಗೆ ‘ಸಚಿವ ಈಶ್ವರ್ ಖಂಡ್ರೆ’ ಆದೇಶ
ಶಿವಮೊಗ್ಗ: ಮಾ.7ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut