ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಹಾಗೂ ಎಂಡಿ ಸೀಟ್ಗಳ ಸಂಖ್ಯೆಯಲ್ಲಿ ಕಡಿತವಾಗಿದೆ ಎಂದು ಶಾಸಕ ಸೋಮಶೇಖರ ರೆಡ್ಡಿ ಕಿಡಿಕಾರಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಹಾಗೂ ಎಂಡಿ ಸೀಟ್ಗಳ ಸಂಖ್ಯೆಯಲ್ಲಿ ಕಡಿತವಾಗಿದೆ, ಈ ಬಗ್ಗೆ ಮಾತನಾಡಲು ಸುಧಾಕರ್ ಅವರಿಗೆ ಕರೆ ಮಾಡಿದೆ. ಆದರೆ ಅವರು ಕರೆ ಸ್ವೀಕರಿಸಲಿಲ್ಲ ಎಂದರು.
ಸಿಎಂ ಬಸವರಾಜ ಬೊಮ್ಮಾಯಿ ಕೇವಲ 30 ಸೆಕೆಂಡ್ನಲ್ಲಿ ಕೆಲಸ ಮಾಡಿಕೊಟ್ಟರು. ಇವರೇನೂ ಸಿಎಂಗಿಂತ್ಲೂ ದೊಡ್ಡವರಾ? ಬೊಮ್ಮಾಯಿ ಅವರನ್ನು ಭೇಟಿಯಾಗಿ, ನಮ್ಮ ಸಮಸ್ಯೆ ಹೇಳಿಕೊಂಡೆವು. ಅವರು ತಕ್ಷಣ ಸಮಸ್ಯೆಗೆ ಸ್ಪಂದಿಸಿದರು. ಆದರೆ ಸಚಿವ ಸುಧಾಕರ ವಿರುದ್ಧ ಕ್ರಮ ಜರುಗಿಸಬೇಕೆಂದು ನಮ್ಮ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಮನವಿ ಮಾಡುತ್ತೇನೆ ಎಂದರು.
ರೈಲ್ವೆ ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ: ಈ ರೈಲುಗಳ ಸೇವೆ ಮರುಸಂಚಾರ, ರದ್ದು, ಮಾರ್ಗ ಬದಲಾವಣೆ