ತುಮಕೂರು : ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ದೂರಿಗೆ ಬಿಜೆಪಿ ನಾಯಕರ ನಿಯೋಗ ಬೇಡಿ ವಿಚಾರವಾಗಿ ಬಿಜೆಪಿಯವರು ಹೋಗಲಿ ಯಾರು ಬೇಡ ಅಂತ ಹೇಳುತ್ತಾರೆ ಎಂದು ತುಮಕೂರಿನಲ್ಲಿ ಬಿಜೆಪಿ ವಿರುದ್ಧ ಡಾ. ಜಿ ಪರಮೇಶ್ವರ್ ವಾಗ್ದಾಳಿ ನಡೆಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹೋಗಲಿ ಅವರಿಗೆ ಯಾರು ಬೇಡ ಅಂತ ಹೇಳುತ್ತಾರೆ. ಈ ಸಂದರ್ಭದಲ್ಲಿ ಎಲ್ಲರೂ ಸಹಕಾರ ಮತ್ತು ಶಾಂತಿ ಕಾಪಾಡಬೇಕು ಪ್ರಚೋದನೆ ಮಾಡೋದೆಲ್ಲ ಮಾಡಿದರೆ ಸಹಿಸಲ್ಲ. ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದವರನ್ನು ಯಾವುದೇ ಕಾರಣಕ್ಕೂ ನಾವು ರಕ್ಷಣೆ ಮಾಡಲ್ಲ. ಇಂದು ಜಿಲ್ಲಾ ಉಸ್ತುವಾರಿ ಸಚಿವರು ಶಾಂತಿ ಸಭೆ ಮಾಡುತ್ತಿದ್ದಾರೆ. ಹಿಂದೂಗಳಿರಲಿ ಮುಸ್ಲಿಮರು ಇರಲಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಜಿ.ಪರಮೇಶ್ವರ್ ತಿಳಿಸಿದರು.