ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಖಂಡಿಸಿ ನಾಳೆ ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿಯಿಂದ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಸಂಬಂಧ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಅವರು ಆದೇಶ ಹೊರಡಿಸಿದ್ದು, ನಾಳೆ ರಾಷ್ಟ್ರ ಸುರಕ್ಷತಾ ಜನಾಂದೋಲನ ಸಮಿತಿಯಿಂದ ಜಾಥಾ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ತಿಳಿಸಿದ್ದಾರೆ.
ಇಂದಿನಿಂದ ನಾಳೆ ಮಧ್ಯರಾತ್ರಿವರೆಗೆ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಂಡಿರುವುದರಿಂದ ಮೆರವಣಿಗೆ, ಸಭೆ, ಸಮಾರಂಭಕ್ಕೆ ನಿಷೇಧವಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿದೆ.
Watch Video: ಉತ್ತರ ಪ್ರದೇಶದಲ್ಲಿ ಸಚಿವರ ಸಂಬಂಧಿಯಿಂದಲೇ ಹೂವಿನ ವ್ಯಾಪಾರಿ ಮೇಲೆ ಹಲ್ಲೆ, ವೀಡಿಯೋ ವೈರಲ್
Watch Video: ಹಮಾಸ್ ಸೈನಿಕನ ಹಣೆಗೆ ಮುತ್ತಿಟ್ಟ ಬಿಡುಗಡೆಗೊಂಡ ಇಸ್ರೇಲಿ ಒತ್ತೆಯಾಳು | Israel-Hamas war