ಕೊಪ್ಪಳ : ಇತ್ತೀಚಿಗೆ ಬೀದಿ ನಾಯಿಗಳ ದಾಳಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ, ಶಾಲಾ ಆವರಣದಲ್ಲಿ ವಿದ್ಯಾರ್ಥಿ ಶಿಕ್ಷಕರ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಎಂಬ ಗ್ರಾಮದಲ್ಲಿ ನಡೆದಿದೆ.
ಹೌದು ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಏಕಾಏಕಿ ಬಿದಿ ನಾಯಿ ದಾಳಿ ಮಾಡಿದೆ. ನಿನ್ನೆಯಿಂದ ಸಿಕ್ಕ ಸಿಕ್ಕವರ ಮೇಲೆ ಬೀದಿ ನಾಯಿ ದಾಳಿ ಮಾಡುತ್ತಿದೆ ನಿನ್ನೆಯಿಂದ ಸುಮಾರು 10ಕ್ಕೂ ಹೆಚ್ಚು ಜನರ ಮೇಲೆ ಬೀದಿನಾಯಿ ದಾಳಿ ಮಾಡಿದೆ ಗಾಯಾಳುಗಳನ್ನು ಕೂಡಲೇ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.