ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರೆದಿದ್ದು, 20ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಜನರ ಮೇಲೆ ಬೀದಿನಾಯಿಗಳು ದಾಳಿ ಮಾಡಿವೆ. ಎಂ ಜಿ ರಸ್ತೆ, ಮಾರ್ಕೆಟ್ ರಸ್ತೆಯಲ್ಲಿ ಬೀದಿನಾಯಿಗಳು 20 ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿವೆ.
ಗಾಯಗೊಂಡ 20 ಜನರನ್ನು ಮಲ್ಲೇಗೌಡ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯೂ ಸಹ ಬೀದಿ ನಾಯಿಗಳು 8 ಜನರ ಮೇಲೆ ದಾಳಿ ಮಾಡಿದ್ದವು. ಬೀದಿ ನಾಯಿಗಳ ದಾಳಿಯಿಂದ ಜನರು ಇದೀಗ ಕಂಗಾಲಾಗಿದ್ದಾರೆ. ಮಕ್ಕಳು ಸೇರಿದಂತೆ 20 ಜನರ ಮೇಲೆ ಬೀದಿನಾಯಿಗಳು ದಾಳಿ ಮಾಡಿವೆ. ಮೂರು ದಿನಗಳಲ್ಲಿ 35ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟದ ನಗರ ಸಭೆಯ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.