ವಿಜಯಪುರ : ವಿಜಯಪುರ ನಗರದಲ್ಲಿ ಬೀದಿ ನಾಯಿಗಳು ಅಟ್ಟಹಾಸ ಮೆರೆದಿದ್ದು, ಬಾಲಕಿಯನ್ನು ಅಟ್ಟಾಡಿಸಿ ಬೀದಿ ನಾಯಿಗಳು ದಾಳಿ ಮಾಡಿವೆ. ವಿಜಯಪುರದ ರಹಿಮ ನಗರದಲ್ಲಿ ಈ ಒಂದು ಘಟನೆ ನಡೆದಿದೆ.
ಬಾಲಕಿ ಮೇಲಿನ ನಾಯಿಗಳು ದಾಳಿ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸರಿಯಾಗಿದೆ. ತಕ್ಷಣ ಬೈಕ್ ಸವಾರ ಬಾಲಕಿಯನ್ನು ರಕ್ಷಣೆ ಮಾಡಿದ್ದಾನೆ. ಇದೇ ವರ್ಷದಲ್ಲಿ ವಿಜಯಪುರ ಜಿಲ್ಲೆಯ ಒಂದರಲ್ಲಿ 20 ಸಾವಿರ ಮಂದಿಗೆ ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. ಆದರೂ ಕೂಡ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.








