ಬೆಂಗಳೂರು: ಓಲಾ, ಊಬರ್ ( Ola, Uber Taxi ) ಪರವಾನಗಿ ರದ್ದಾಗಿರುವ ಬಗ್ಗೆ ಸಾರಿಗೆ ಆಯುಕ್ತರೊಂದಿಗೆ ಮಾತನಾಡಿದ್ದು, ಯಾವುದೇ ಪರವಾನಗಿ ಇಲ್ಲದೆ ಯಾವ ಸಂಸ್ಥೆಯನ್ನೂ ನಡೆಸಬಾರದು. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ.
ಇಂದು ತಮ್ಮ ನಿವಾಸದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸರ್ಕಾರ ಎ ಸ್.ಸಿ, ಎಸ್.ಟಿ ಸಮುದಾಯಕ್ಕೆ ಮೀಸಲಾತಿ ( SC, ST Reservation ) ಹೆಚ್ಚಿಸಿ ಕಾನೂನಾತ್ಮಕವಾಗಿ ರಕ್ಷಣೆ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಹಿಂದುಳಿದ ವರ್ಗಗಳ ಆಯೋಗದ ತಜ್ಞರೊಡನೆ ಸಮಾಲೋಚಿಸಲಾಗುವುದು ಎಂದರು.
2023ರ ಚುನಾವಣೆಯಲ್ಲಿ BJP ಭರ್ಜರಿ ಗೆಲುವು ಸಾಧಿಸಲಿದೆ – CM ಬೊಮ್ಮಾಯಿ ವಿಶ್ವಾಸ
ಗಂಧದಗುಡಿ ಟೀಸರ್ ಬಿಡುಗಡೆಗೆ ಆಹ್ವಾನ
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಿನಿಮಾ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮ ಉದ್ಘಾಟಿಸಲು ಆಮಂತ್ರಣ ನೀಡಿದರು. ರಾಘವೇಂದ್ರ ರಾಜ್ ಕುಮಾರ್ ಅವರೂ ಇದ್ದರು ಎಂದರು.