ಶಿವಮೊಗ್ಗ : ರಾಜ್ಯದ ಖಾಸಗಿ ಶಾಲೆಗಳಲ್ಲಿ ಡೊನೇಷನ್ ತೆಗೆದುಕೊಳ್ಳುವಂತಿಲ್ಲ. ಒಂದು ವೇಳೆ ತೆಗೆದುಕೊಂಡಿದ್ದು ಗಮನಕ್ಕೆ ಬಂದ್ರೆ ಕ್ರಮ ಕೈಗೊಳ್ಳಲಾಗುವುವುದ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಡಿದಂತ ಅವರು, ಖಾಸಗಿ ಶಾಲೆಗಳಿಗೆ ನಾನು ಒಂದು ಸಲಹೆ ಕೊಡುತ್ತೇನೆ. ಕಾನೂನಿನ ಪ್ರಕಾರವೇ ಶಾಲೆಯಲ್ಲಿ ಶುಲ್ಕ ತೆಗೆದುಕೊಳ್ಳಬೇಕು. ಈ ಮೂಲಕ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಖಾಸಗಿ ಶಾಲೆಗಳು ಸಹಾಯ ಮಾಡಬೇಕು. ಅದರ ಹೊರತಾಗಿ ಅಕ್ರಮವಾಗಿ ಫೀಸ್ ತೆಗೆದುಕೊಂಡ್ರೆ, ಹೆಚ್ಚಿನ ಶುಲ್ಕವನ್ನು ಮಕ್ಕಳ ಪೋಷಕರಿಂದ ವಸೂಲಿ ಮಾಡಿದ್ದೇ ಆದಲ್ಲಿ, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಶಾಲಾ ಮಾನ್ಯತೆಯನ್ನು ರದ್ದುಗೊಳಿಸೋದಾಗಿ ಎಚ್ಚರಿಕೆ ನೀಡಿದರು.