ಹಾಸನ : ಇತ್ತೀಚೆಗೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ಪ್ರಕರಣಕ್ಕೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ್ದು ‘FSL’ ವರದಿ ಬಂದ ನಂತರ ಘೋಷಣೆ ಕೂಗಿದ್ದು ಸಾಬೀತಾದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ನಿಮ್ಮ ತ್ವಚೆಯ ಆರೈಕೆಯಲ್ಲಿ ರೋಸ್ ವಾಟರ್‌ನ ಪ್ರಾಮುಖ್ಯತೆ ಹೀಗಿದೆ ನೋಡಿ!
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ.ರಾಜಕೀಯ ಕಾರಣಕ್ಕಾಗಿ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ ಎಫ್ಎಲ್ ವರದಿಯನ್ನು ಆದರಿಸಿ ಕಠಿಣ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕದಲ್ಲಿ ‘ಚಿರತೆಗಳ’ ಸಂಖ್ಯೆಯಲ್ಲಿ ಭಾರಿ ಹೆಚ್ಚಳ : ‘ಭಾರತದಲ್ಲಿ ಚಿರತೆಗಳ ಸ್ಥಿತಿಗತಿ’ ವರದಿಯಲ್ಲಿ ಬಹಿರಂಗ
ಜಯಪ್ರಕಾಶ್ ಹೆಗಡೆ ಸಮಿತಿ ಜಾತಿಗಣತಿ ವರದಿಯನ್ನು ಸಲ್ಲಿಸಿದ್ದಾರೆ. ಜಾತಿಗಣತಿ ವರದಿಯಲ್ಲಿ ಏನಿದೆ ಎಂದು ಇನ್ನೂ ನೋಡಿಲ್ಲ.ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಘೋಷಣೆಯಲ್ಲಿ ಯಾವುದೇ ಗೊಂದಲವಿಲ್ಲ ಹಾಸನ ಕ್ಷೇತ್ರಕ್ಕೆ ಆದಷ್ಟು ಬೇಗ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಹಿಂದೂ ವಿರೋಧಿ ಏಕೆ ? : ಟ್ವಿಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ