ಬೆಂಗಳೂರು : ಪಿಎಸ್ಐ ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗ್ರಹ ಇಲಾಖೆ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸಿಸಿಬಿ ತನಿಖೆ ಮಾಡುತ್ತಿದೆ ಅಕ್ರಮ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಿಎಸ್ಐ ಲಿಂಗಯ್ಯ ಗುಪ್ತರ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಬೆಂಗಳೂರಿಗೆ ಕೇಂದ್ರದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮಾಡುತ್ತಿದ್ದೇವೆ ಈ ಮಧ್ಯೆ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿಸಿದರು.
ಮಾಹಿತಿ ಪಡೆಯುವಾಗ ಆಡಿಯೋ ಬೆಳಕಿಗೆ ಬಂದಿದೆ ಮಾಹಿತಿ ಕಲೆ ಹಾಕಲು ಫೇಕ್ ಆಡಿಯೋ ಮಾಡಿದ್ದೆ ಅಂತ ಹೇಳಿದ್ದಾರೆ ಆಡಿಯೋ ಸತ್ಯಾನ ಅಲ್ವಾ ಅನ್ನೋದರ ಬಗ್ಗೆ ಸಿಸಿಬಿ ತನಿಖೆ ಮಾಡುತ್ತಿದೆ ಮುಂಜಾಗ್ರತಾ ಕ್ರಮ ಕೈಗೊಂಡು ಪಿಎಸ್ಐ ನೇಮಕ ಪರೀಕ್ಷೆ ಮಾಡುತ್ತೇವೆ ಎಂದು ಗ್ರಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಪ್ರಕರಣ ಹಿನ್ನೆಲೆ?
ಪಿ.ಎಸ್.ಐ.ಮತ್ತು ಸಿಟಿಐ ಪರೀಕ್ಷೆ ಪತ್ರಿಕೆ ಲೀಕ್ ಮಾಡಿರುವ ಆರೋಪ ಕೇಳಿ ಬಂದಿದೆ. ಇಂಟೆಲಿಜೆನ್ಸ್ ವಿಭಾಗದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಲಿಂಗಯ್ಯ ಎಂಬ ಅಧಿಕಾರಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ.
545 ಪಿಎಸ್‌ಐ ಹುದ್ದೆ ಸಿಟಿಐ ಕೆಪಿಎಸ್‌ಸಿ ನಡೆಸುತ್ತಿರುವ ಪರೀಕ್ಷೆ ಇದಾಗಿದೆ. ಇತ್ತ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಹಾಗೂ ವಾಟ್ಸ್‌ಆ್ಯಪ್ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೂರಾರು ಪರೀಕ್ಷಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಮಾಡಿದ್ದಾರೆ.
ಹಣಕ್ಕೆ ಬೇಡಿಕೆ, ಪರೀಕ್ಷೆ ವಿಚಾರವಾಗಿ ಡೀಲ್ ಬಗ್ಗೆ ಲಿಂಗಯ್ಯ ಮಾತಾಡಿದ್ದಾರೆ ಎನ್ನುವ ಆಡಿಯೋ, ವಾಟ್ಸಾಪ್ ಚಾಟ್ ವೈರಲ್ ಹಿನ್ನೆಲೆ ಚಂದ್ರಾಲೇಔಟ್ ಠಾಣೆಯಲ್ಲಿ ಪರೀಕ್ಷಾರ್ಥಿಗಳು ದೂರು ನೀಡಿದ್ದಾರೆ. ಇತ್ತ ನೂರಾರು ಪರೀಕ್ಷಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಆರೋಪಿಸಿ ದೂರು ದಾಖಲಿಸುತ್ತಿದ್ದಂತೆ ಎಚ್ಚೆತ್ತ ಸಿಸಿಬಿ ಅಧಿಕಾರಿಗಳು ಪಿಎಸ್‌ಐ ಲಿಂಗಯ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಇಂಟಲಿಜೆನ್ಸ್ ವಿಭಾಗದಲ್ಲಿ ಲಿಂಗಯ್ಯ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ನಿನ್ನೆಯೇ ಸಿಸಿಬಿ ಅಧಿಕಾರಿಗಳು ಲಿಂಗಯ್ಯನನ್ನು ವಶಕ್ಕೆ ಪಡೆದು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ವಾಟ್ಸಪ್ ಚಾಟ್ ಒಂದಿಷ್ಟು ಸ್ಕ್ರೀನ್ ಶಾಟ್ಗಳು ಕೂಡ ವೈರಲ್ ಆಗಿವೆ ಎಂದು ಹೇಳಲಾಗುತ್ತಿದೆ. ಮಾತುಕತೆಯ ನಡೆಸಿದ್ದು ಯಾರು ಅನ್ನೋದನ್ನ ಸಿಸಿಬಿ ಅಧಿಕಾರಿಗಳು ಇದೀಗ ವಿಚಾರಣೆ ವೇಳೆ ಪತ್ತೆ ಹಚ್ಚಲಿದ್ದಾರೆ. ಲಿಂಗಯ್ಯ ಜೊತೆ ಮಾತುಕತೆ ನಡೆಸಿದವರ ವಿಚಾರ ನಡೆಸಲು ಸಿಸಿ ವೇದಿಕಾರಿಗಳು ಸಿದ್ಧತೆ ನಡೆಸಿದ್ದಾರೆ.