ಶಿವಮೊಗ್ಗ : ಎನ್ ಐ ಎ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಪಿಎಫ್ಐ ಸಂಘಟನೆಯ ಶಾಹೀದ್ ಖಾನ್ ಬಿಡುಗಡೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಪಿಎಫ್ಐ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.
ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಶಾಹೀದ್ ಖಾನ್ ಬಿಡುಗಡೆಗೆ ಒತ್ತಾಯಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದು, ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಹಾಕಲಾಗಿದೆ.
ಬಂಧಿತ ಶಾಹಿದ್ ನಿಂದ 22 ಲಕ್ಷಕ್ಕೂ ಹೆಚ್ಚು ಹಣ ಹಾಗೂ ಏಳು ಮೊಬೈಲ್ ಗಳನ್ನು ಸೀಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ವರೆಗೂ ಶಿವಮೊಗ್ಗದಲ್ಲೇ ಶಾಹೀದ್ ನನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದು, ನಂತರ ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ. ಶಾಹೀದ್ ಜೊತೆ ಇನ್ನೂ 7 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
BIGG NEWS : PFI ಸದಸ್ಯ ‘ಶಾಹೀದ್’ ನಿವಾಸದಲ್ಲಿ ಲಕ್ಷ ಲಕ್ಷ ಹಣ, ಮೊಬೈಲ್ ರಾಶಿ ಕಂಡು ‘NIA’ ಅಧಿಕಾರಿಗಳು ಶಾಕ್
BIG NEWS: ಹೈಕೋರ್ಟ್ ಮೆಟ್ಟಿಲೇರಿದ್ದ ಮನೆ ಮಾಲೀಕ ಬಿಬಿಎಂಪಿ ಬಿಸಿ; 29 ಕಟ್ಟಡಗಳ ವಿರುದ್ಧ ಕಾರ್ಯಾಚರಣೆಗೆ ಆದೇಶ