ಮದ್ದೂರು ನಗರಸಭೆಗೆ ‘ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ’ ಸೇರ್ಪಡೆಗೆ ತೀವ್ರ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಮಂಡ್ಯ : ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಿರುವುದನ್ನು ವಿರೋಧಿಸಿ ಸ್ಥಳೀಯ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಂಡು ಗ್ರಾಮ ಪಂಚಾಯಿತಿ ಕಚೇರಿ ಎದುರು ಸೋಮವಾರದಿಂದ ಪ್ರತಿಭಟನೆ ಕೈಗೊಂಡಿದ್ದಾರೆ. ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾ.ಪಂ. ಕಚೇರಿ ಬಳಿ ಆಗಮಿಸಿದ ನೂರಾರು ಸಂಖ್ಯೆಯ ನಿವಾಸಿಗಳು ಪಂಚಾಯಿತಿಯನ್ನು ನಗರಸಭೆಯನ್ನಾಗಿಸಲು ಸಹಿ ಹಾಕಿರುವ ಸ್ಥಳೀಯ ಚುನಾಯಿತ ಪ್ರತಿನಿಧಿಗಳ ವಿರುದ್ಧ ಮತ್ತು ಶಾಸಕರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. … Continue reading ಮದ್ದೂರು ನಗರಸಭೆಗೆ ‘ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ’ ಸೇರ್ಪಡೆಗೆ ತೀವ್ರ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ