ಬಳ್ಳಾರಿ: ಬಳ್ಳಾರಿಯ ವಿಜಯಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳದ ಆರೋಪದ ಮೇಲೆ ಇಂಗ್ಲೀಷ್ ಪ್ರೊಫೆಸರ್ ಅಮಾನತು ಮಾಡಿ ಎಂದು ಆದೇಶ ಜಾರಿ ಮಾಡಲಾಗಿದೆ.
BIGG NEWS: ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಭೀತಿ; ನಮ್ಮ ಮೆಟ್ರೋ, ಬಿಎಂಟಿಸಿ ಬಸ್ ನಲ್ಲಿ ಕಟ್ಟುನಿಟ್ಟಿನ ಕ್ರಮ
ವಿಶ್ವವಿದ್ಯಾಲದಯ ರಿಜಿಸ್ಟರ್ ಅವರು ಈ ಆದೇಶವನ್ನು ಜಾರಿ ಮಾಡಿದ್ದು, ಕರ್ನಾಟಕ ಸಿವಿಲ್ ಸೇವೆಗಳ ಕಾಯ್ದೆ ಮತ್ತು ಕಾನೂನಾತ್ಮಕವಾಗಿ ಪಿಎಚ್ಡಿ ವಿದ್ಯಾರ್ಥಿನಿ. ಸಲ್ಲಿಸಿದ್ದ ಲೈಂಗಿಕ ಕಿರುಕುಳದ ಲಿಖಿತ ಆರೋಪದ ಹಿನ್ನೆಲೆಯಲ್ಲಿ ಸುದೀರ್ಘ ವಿಚಾರಣೆಯನ್ನು ನಡೆಸಿ, ಸಮಿತಿ ಸಲ್ಲಿಸಿದ ವರದಿಯನ್ನು ಸಿಂಡಿಕೇಟ್ ಸಭೆಯ ನಿರ್ಣಯದ ಪ್ರಕಾರ ಡಾ. ಚಾಂದ್ಭಾಷ ಎಂ. ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.ಪ್ರೊ. ಚಾಂದ್ಭಾಷ ವಿರುದ್ಧ ಸಂಶೋಧನಾ ವಿದ್ಯಾರ್ಥಿನಿ ನವೆಂಬರ್ 7, 2022 ರಂದು ಲೈಂಗಿಕ ಕಿರುಕುಳದ ಕುರಿತು ವಿಶ್ವವಿದ್ಯಾಲಯಕ್ಕೆ ಲಿಖಿತ ದೂರನ್ನು ಸಲ್ಲಿಸಿದ್ದರು.