ಶಿರಸಿ: ಮನೆಯಲ್ಲಿ ಪೋಷಕರು ಬೈಯ್ದಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿರಸಿ ನಗರದ ಪ್ರೊಗ್ರೆಸ್ಸಿವ್ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯ ಅವರಣದಲ್ಲಿರುವ ಬಾವಿಗೆ ಹಾರಿ ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ಆಯನ್ ಬಾಬು ಶೇಖ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯಾಗಿದ್ದು, ಈತ ಒಂಬತ್ತನೇ ತರಗತಿಯಲ್ಲಿ ಓದುತಿದ್ದ ಎನ್ನಲಾಗಿದೆ.
ಘಟನ ಸ್ಥಳಕ್ಕೆ, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ಮರೋಣತ್ತರ ಪರೀಕ್ಷೆಗೆ ಶವವನ್ನು ಸಾಗಿಸಿದ್ದು, ಹೆಚ್ಚಿನ ತನಿಖೆಯನ್ನು ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅಕ್ಟೋಬರ್ 2 ರಿಂದ ಜಾರಿ ಯಶಸ್ವಿನಿ ಯೋಜನೆ, ಸಚಿವ ಎಸ್.ಟಿ. ಸೋಮಶೇಖರ್
BREAKING NEWS : ವಿಜಯಪುರ ಜಿಲ್ಲೆಯಲ್ಲಿ ಜೋರಾದ ಶಬ್ದದೊಂದಿಗೆ ಭೂಕಂಪನದ ಅನುಭವ | Earthquakes
ವಿಜಯಪುರ : ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಇಂದು ಮಧ್ಯಾಹ್ನ 2.04 ರ ಸುಮಾರಿಗೆ ಜನರಿಗೆ ಲಘು ಭೂಕಂಪನದ ಅನುಭವವಾಗಿದೆ. ಇಂದು ಮಧ್ಯಾಹ್ನ 2.04 ರ ಸುಮಾರಿಗೆ ಭೂಮಿಯಿಂದ ಶಬ್ದ ಕೇಳಿ ಬಂದಿದೆ ಎನ್ನಲಾಗಿದೆ. ಈ ವೇಳೆ ಗ್ರಾಮದ ಜನರಿಗೆ ಲಘು ಭೂಕಂಪನದ (Earthquake) ಅನುಭವವಾಗಿದೆ. ಇದರಿಂದ ಬೆಚ್ಚಿದ ಜನರು ಮನೆಯಿಂದ ಹೊರಕ್ಕೆ ಓಡಿ ಬಂದಿದ್ದಾರೆ.
ಬಾಬಾನಗರ, ಬಿಜ್ಜರಗಿ,. ಕಳ್ಳಕವಟಗಿ, ಘೋಣಸಗಿ ಗ್ರಾಮದ ಜನರಿಗೆ ಭೂಕಂಪನದ ಅನುಭವವಾಗಿದೆ. ತುಂತುರು ಮಳೆ ನಡುವೆ ಭೂಮಿಯಿಂದ ಶಬ್ದ ಕೇಳಿಬಂತು ಎಂದು ಗ್ರಾಮಸ್ಥರು ಹೇಳಿದ್ದಾರೆ. ಆದರೆ ಜಿಲ್ಲಾಡಳಿತ ನೀಡಿರುವ ಮಾಹಿತಿ ಪ್ರಕಾರ ಯಾವುದೇ ಭೂಕಂಪನ ಸಂಭವಿಸಿಲ್ಲ ಎಂದು ವರದಿ ಮಾಡಿದೆ.