ಶಿವಮೊಗ್ಗ : ಬದುಕಿನಲ್ಲಿ ವಿದ್ಯಾರ್ಥಿ ಜೀವನ ಪ್ರಮುಖ ಘಟ್ಟವಾಗಿರುತ್ತದೆ ಪೋಷಕರ ನಿರೀಕ್ಷೆ ನಿಜವಾಗಿಸಲು ಅವಿರತ ಪ್ರಯತ್ನ ಮಾಡಿ ಉತ್ತಮ ಫಲಿತಾಂಶ ಪಡೆಯಿರಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀಮತಿ ಇಂದಿರಾಗಾoಧಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ, ಪ್ರಿಯದರ್ಶಿನಿ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಶ್ರೀಮತಿ ಇಂದಿರಾಗಾoಧಿ ಕಾಲೇಜು ರಾಜ್ಯದಲ್ಲಿಯೆ ಮಾದರಿಯಾಗಿ ಕೆಲಸ ಮಾಡುತ್ತಿದೆ. ಅತಿಹೆಚ್ಚು ವಿದ್ಯಾರ್ಥಿನಿಯರು ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದು, ಓದಿನ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಯಲ್ಲೂ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಕಾಲೇಜಿನ ಅಭಿವೃದ್ದಿಗೆ ಬೇಕಾದ ಅಗತ್ಯ ಸೌಲಭ್ಯ ನೀಡಲಾಗಿದೆ. ಆದರೂ ಕೆಲವರು ಹೊರ ಜಿಲ್ಲೆಗಳಿಗೆ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಕಳಿಸುತ್ತಿರುವುದು ಬೇಸರದ ಸಂಗತಿ. ಕಾಲೇಜಿಗೆ ಸುಸಜ್ಜಿತ ರಂಗಮoದಿರ ನಿರ್ಮಾಣಕ್ಕೆ ಬೇಕಾದ ಸಹಕಾರ ನೀಡಲಾಗುತ್ತದೆ. ಕಾಲೇಜಿನ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ರೀತಿಯ ಸಮಸೆಯಾಗಬಾರದು ಎಂದರು.
ಚಿತ್ರನಟ ಅರುಣ್ ಸಾಗರ್ ಮಾತನಾಡಿ, ವಿದ್ಯೆ ನಮಗೆ ಮಾನವೀಯ ಮೌಲ್ಯವನ್ನು ಕಲಿಸುತ್ತದೆ. ವಿದ್ಯಾರ್ಥಿ ಸಂದರ್ಭದಲ್ಲಿ ಸಾಧನೆಗೆ ಹೆಚ್ಚಿನ ಅವಕಾಶ ಇರುತ್ತದೆ. ನಿಮ್ಮ ಆಸಕ್ತಿದಾಯಕ ಕ್ಷೇತ್ರವನ್ನು ಗುರುತಿಸಿಕೊಳ್ಳಲು ವಿದ್ಯಾರ್ಥಿ ಜೀವನ ಸಕಾಲವಾಗಿರುತ್ತದೆ. ಇಂದಿರಾಗಾoಧಿ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ನಮ್ಮೂರಿನ ಕೀರ್ತಿಯನ್ನು ಬೆಳಗಿಸುತ್ತಿದ್ದಾರೆ. ಕಾಲೇಜಿಗೆ ಪೂರಕವಾದ ಆಡಿಟೋರಿಯಂ ನಿರ್ಮಾಣಕ್ಕೆ ಶಾಸಕರು ಗಮನ ಹರಿಸಬೇಕು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಪೂರಕ ಕಾರ್ಯಕ್ರಮಗಳನ್ನು ರೂಪಿಸಿ ಎಂಬುದಾಗಿ ಸಲಹೆ ಮಾಡಿದರು.
ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯೆ ಪ್ರೊ. ರಾಜೇಶ್ವರಿ ಎಚ್., ವರ್ಗಾವಣೆಗೊಂಡ ಪ್ರಾಧ್ಯಾಪಕರಾದ ಡಾ. ಎಂ.ರoಗಣ್ಣನವರ್, ಡಾ. ಮಹಾವೀರ, ಮಾರುತಿ ಗೌಡ, ಲೋಕೇಶಪ್ಪ ಎಚ್. ಅವರನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯ ಪ್ರೊ. ಚಂದ್ರಶೇಖರ ಟಿ. ಅಧ್ಯಕ್ಷತೆ ವಹಿಸಿದ್ದರು.
ಈ ವೇದಿಕೆಯಲ್ಲಿ ಸಾಗರ ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಮಧುಮಾಲತಿ, ಬಿ.ಎಚ್.ಲಿಂಗರಾಜ್, ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ಎಲ್.ಚಂದ್ರಪ್ಪ, ಪ್ರಮುಖರಾದ ಡಾ. ಶಿವಾನಂದ ಭಟ್, ಡಾ. ರತ್ನಾಕರ್, ಯತೀಶ್ ಕುಮಾರ್ ಇನ್ನಿತರರು ಹಾಜರಿದ್ದರು.
ಜಾತಿಗಣತಿ ಸಮೀಕ್ಷೆ: 45 ನಿಮಿಷಗಳ ಕಾಲ ಸಮಾಧಾನದಿಂದ ವಿವರ ನೀಡಿದ ಸಿಎಂ ಸಿದ್ಧರಾಮಯ್ಯ
BIG NEWS: 7 ನಿಗಮ ಮುಚ್ಚಲು, 9 ನಿಗಮ ವಿಲೀನ ಮಾಡಲು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು