ಬೆಂಗಳೂರು ಗ್ರಾಮಾಂತರ : ಈಜಲು ತೆರಳಿದ್ದ ಬಾಲಕ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಾಯಕನಹಳ್ಳಿಯ ಮೊರಾರ್ಜಿ ವಸತಿ ಶಾಲೆ ಬಳಿ ನಡೆದಿದೆ.
ಮೃತ ಬಾಲಕನನ್ನು ಜುನೈದ್ (13) ಎಂದು ಗುರುತಿಸಲಾಗಿದೆ. ಮಕ್ಕಳನ್ನು ನೋಡಿಕೊಳ್ಳಲು ಮೇಲ್ವಿಚಾರಕನನ್ನು ನೇಮಿಸಿ ಶಿಕ್ಷಕರು ಪ್ರವಾಸಕ್ಕೆ ತೆರಳಿದ್ದರು. ಈ ಮೇಲ್ವಿಚಾರಕ 6 ಮಂದಿ ಮಕ್ಕಳನ್ನು ಕರೆದುಕೊಂಡು ಈಜಲು ಹೋಗಿದ್ದನು.
ನೀರಿನ ಹೊಂಡಕ್ಕೆ ಈಜಲು ಇಳಿದ ಆರು ವಿದ್ಯಾರ್ಥಿಗಳ ಪೈಕಿ ಜುನೈದ್ (13) ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ, ಈ ಸಂಬಂಧ ಚನ್ನರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲೆ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
BIGG NEWS : ಸುವರ್ಣಸೌಧದಲ್ಲಿ ನಾಲ್ಕು ಪ್ರತಿಮೆಗಳ ನಿರ್ಮಾಣ ಕಾಮಗಾರಿಗೆ ಸಿಎಂ ಬೊಮ್ಮಾಯಿ ನಾಳೆ ಚಾಲನೆ
BIGG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : 33 ಲಕ್ಷ ಜನರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ