ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ.
ವಿದ್ಯಾರ್ಥಿಗಳ ಧರಣಿಗೆ ಬಿಯುಟಿಸಿ ಬೆಂಬಲ ನೀಡಿದ್ದು, ವಿವಿ ರಸ್ತೆಯಲ್ಲಿ ಖಾಸಗಿ ವಾಹನಗಳಿಗೆ ನಿರ್ಬಂಧ ಹೇರಬೇಕು, ನಿನ್ನೆ ನಡೆದಂತಹ ಘಟನೆ ಮತ್ತೆ ಮರುಕಳಿಸಬಾರದು , ಗಾಯಗೊಂಡ ವಿದ್ಯಾರ್ಥಿನಿ ಶಿಲ್ಪಾ ಸ್ಥಿತಿ ಗಂಭೀರವಾಗಿದೆ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ, ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಚಾಲಕ ಸುರೇಶ್ ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ,
ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
ಬಸ್ ಹತ್ತುವಾಗ ಕೆಳಗೆ ಬಿದ್ದ ಯುವತಿಯನ್ನು ಗಮನಿಸದೇ ಚಾಲಕ ಬಸ್ ಮುಂದಕ್ಕೆ ಚಲಾಯಿಸಿ ಅಜಾಗರೂಕತೆ ತೋರಿದ್ದಾನೆ. ಈ ಹಿನ್ನೆಲೆ ಯುವತಿ ಸೊಂಟದ ಮೇಲೆ ಬಸ್ ಹರಿದಿದ್ದು, ವಿದ್ಯಾರ್ಥಿನಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಕೋಲಾರ ಮೂಲದ ಶಿಲ್ಪ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಮೊದಲ ವರ್ಷದ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
SC, STಗೆ ಸೇರ್ಪಡೆಗೊಳಿಸಲು ಇತರೆ ಸಮುದಾಯಗಳ ಒತ್ತಾಯದ ಬಗ್ಗೆ ಪರಿಶೀಲಿಸಿ ಕ್ರಮ – ಸಿಎಂ ಬೊಮ್ಮಾಯಿ
ನಾನು ‘ಕಾಂಗ್ರೆಸ್’ ನಿಂದ ಟಿಕೆಟ್ ಕೇಳುತ್ತೀನಿ ಎಂದ ಕನ್ನಡದ ‘ಖ್ಯಾತ ನಟಿ’..ಯಾರು ಗೊತ್ತಾ..?