ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಶಾಲೆಯ ವಿದ್ಯಾರ್ಥಿಯೊಬ್ಬ ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಬಾಲಕನನ್ನು ಹೆದರಿಸಲು ಅವನ ಗುಪ್ತಾಂಗಕ್ಕೆ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬೆಂಕಿ ಕಡ್ಡಿ ಗೀರಿ ಸುಡುವ ಮೂಲಕ ಗಾಯ ಮಾಡಿರುವ ಘಟನೆ ಬೆಳಕಿಗೆ ಬಂದಿದೆ
ಮೂರು ವರ್ಷದ ಬಾಲಕನೋರ್ವ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಎನ್ನಲಾಗ್ತಿದೆ. ಹೀಗಾಗಿ ಬೆಂಕಿ ಕಡ್ಡಿಯಿಂದ ಬಾಲಕನ ಗುಪ್ತಾಂಗವನ್ನು ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸುಟ್ಟಿದ್ದಾರೆ. ಇದರಿಂದ ಬಾಲಕನ ಗುಪ್ತಾಂಗ ಮತ್ತು ತೊಡೆ ಬಳಿ ಸುಟ್ಟ ಗಾಯಗಳಾಗಿವೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಗ್ರಾಮಕ್ಕೆ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಧಾವಿಸಿದ್ದಾರೆ.
ಜೊತೆಗೆ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಬಾಲಕನ ಪೋಷಕರ ಹೇಳಿಕೆಯನ್ನು ಪಡೆದು ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಗೆ ನೋಟಿಸ್ ಜಾರಿ ಮಾಡಿದ್ದಾರೆ.