ಬೆಂಗಳೂರು: ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಗೆ ಜನಿವಾರ ತೆಗೆಸಿದ ಘಟನೆ ಶಿವಮೊಗ್ಗ, ಬೀದರ್ ನಲ್ಲಿ ವರದಿಯಾಗಿತ್ತು. ಈ ಕಾರಣದಿಂದ ಪರೀಕ್ಷೆ ಬರೆಯದೇ ಅಭ್ಯರ್ಥಿಗಳು ವಾಪಾಸ್ ಆಗಿದ್ದರು. ಈ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಸಿಇಟಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ತಿಳಿಸಿದ್ದಾರೆ.
ಲೋಪಗಳಾಗದಂತೆ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿತ್ತು. ಆದರೆ, ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯದ ಕಾರಣ ಪರೀಕ್ಷೆಗೆ ಅನುಮತಿ ನೀಡದಿರುವುದು ಖಂಡನೀಯ. ಎಲ್ಲಾ ಸಂಪ್ರದಾಯಗಳನ್ನು ನಾವು ಗೌರವಿಸಬೇಕು ಎಂದಿದ್ದಾರೆ.
ಈ ನಡೆಯನ್ನು ನಮ್ಮ ಸರ್ಕಾರ ಒಪ್ಪುವುದಿಲ್ಲ. ಈಗಾಗಲೇ ವರದಿ ಕಳಿಸುವಂತೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳಿಂದ ವರದಿ ಬಂದ ಬಳಿಕ ವಿದ್ಯಾರ್ಥಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಲೋಪಗಳಾಗದಂತೆ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿತ್ತು. ಆದರೆ, ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯದ ಕಾರಣ ಪರೀಕ್ಷೆಗೆ ಅನುಮತಿ ನೀಡದಿರುವುದು ಖಂಡನೀಯ. ಎಲ್ಲಾ ಸಂಪ್ರದಾಯಗಳನ್ನು ನಾವು ಗೌರವಿಸಬೇಕು. ಈ ನಡೆಯನ್ನು ನಮ್ಮ ಸರ್ಕಾರ ಒಪ್ಪುವುದಿಲ್ಲ. ಈಗಾಗಲೇ ವರದಿ ಕಳಿಸುವಂತೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳಿಂದ ವರದಿ… pic.twitter.com/xMWSPTYeGX
— DIPR Karnataka (@KarnatakaVarthe) April 19, 2025