ಮಂಡ್ಯ: ಜಿಲ್ಲೆಯ ಖಾಸಗಿ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಪುಡ್ ಪಾಯಿಸನ್ ನಿಂದ ಸಾವನ್ನಪ್ಪಿದ್ದನು. ಈ ಘಟನೆಯ ಸಂಬಂಧ ಶಿಕ್ಷಣ ಸಂಸ್ಥೆಯ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಈ ಕುರಿತಂತೆ ಬಿಇಓ ಉಮಾ ನೀಡಿದ್ದಂತ ದೂರಿನ ಆಧಾರದ ಮೇಲೆ ಕೇಸ್ ದಾಖಲಾಗಿದೆ. ಬಿಇಓ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಹೋಳಿ ಹಬ್ಬ ಆಯೋಜಿಸಿದ್ದಂತ ಪುಷ್ಪೇಂದ್ರ ಕುಮಾರ್, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪದ ನೌಕರ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆಯ ಮುಖ್ಯಸ್ಥ ಲಂಕೇಶ್ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಳವಳ ವ್ಯಕ್ತ ಪಡಿಸಿದ್ದ ಸಿಎಂ ಸಿದ್ಧರಾಮಯ್ಯ
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಂತ ಸಿಎಂ ಸಿದ್ಧರಾಮಯ್ಯ ಅವರು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು ಎಂದಿದ್ದರು.
ಈ ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ಹೇಳಿದ್ದರು.
ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂಬುದಾಗಿ ಎಚ್ಚರಿಸಿದ್ದರು.
‘ನಟ ಪುನೀತ್ ರಾಜ್ ಕುಮಾರ್’ 50ನೇ ಹುಟ್ಟು ಹಬ್ಬ ಹಿನ್ನಲೆ: ಅಭಿಮಾನಿಗಳಿಂದ ‘ಅಪ್ಪು ಸಮಾಧಿ’ ದರ್ಶನ
BIG NEWS: `ಇ ಖಾತಾ’ ಇಲ್ಲದೆ ಆಸ್ತಿ ನೋಂದಣಿ ಇಲ್ಲ: ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ.!