ಬೆಂಗಳೂರು : ಪ್ರಸಕ್ತ (2024-25) ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಪಾರ್ಸಿ ಹಾಗೂ ಸಿಖ್ ಸಮುದಾಯ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆಆರ್ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡಲು ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ https://sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಇವರನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08272 – 225528, ಮಾಹಿತಿ ಕೇಂದ್ರ, ಮಡಿಕೇರಿ 08272 -220214 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.