ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಅಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಆಂಗ್ಲ ಮಾಧ್ಯಮದಲ್ಲಿ ರಾಜ್ಯಪಠ್ಯಕ್ರಮವನ್ನು ಅಳವಡಿಸಿಕೊಂಡು 6 ರಿಂದ 10 ನೇ ತರಗತಿಯವರೆಗೆ ಕಾರ್ಯನಿರ್ವಹಿಸುತ್ತಿರುತ್ತವೆ. ಸದರಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದ ಅರ್ಹ ವಿದ್ಯಾರ್ಥಿಗಳು ಮತ್ತು ಪ.ಜಾತಿ/ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ನಿರ್ದೇಶನಾಲಯದ ಅಧಿಕೃತ ಜಾಲತಾಣದ ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಉಚಿತ ಸೇವೆ ಬಳಸಿಕೊಳ್ಳಲು ತಮ್ಮ ಸಮೀಪದ ಮೌಲಾನಾ ಆಜಾದ್ ಮಾದರಿ ಶಾಲೆಗಳು, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಹಾಗೂ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗೆ ಈ ಕೆಳಕಂಡ ಜಾಲತಾಣವನ್ನು ಸಂಪರ್ಕಿಸಬಹುದು. Website: https://dom.karnataka.gov.in ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಅಲ್ಪಸಂಖ್ಯಾತರ ಸಹಾಯವಾಣಿ: 8277799990, 080-22535900