ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಹಾಗೂ ಪ್ರೋತ್ಸಾಹಧನ ಕಾರ್ಯಕ್ರಮಗಳ ಸಂಬಂಧ ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಅರಿವು ಮೂಡಿಸಲು ಹಾಗೂ ನಿಗಧಿಪಡಿಸಲಾದ ಗುರಿ ಸಾಧಿಸಲು ದಿನಾಂಕ 01.09.2024 ರಿಂದ “ವಿದ್ಯಾರ್ಥಿವೇತನ ಅಭಿಯಾನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಎಲ್ಲಾ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ https://ssp.postmatric.karnataka.gov.in ಮುಖ್ಯಾಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP) ದಲ್ಲಿ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯಗೊಳಿಸಲಾಗಿರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಅಥವಾ ಪೋಸ್ಟ್ ಆಫೀಸ್ ಖಾತೆಗೆ / INDIA POST PAYMENTS BANK (IPPB) ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ (Seed / Link Adhar to Bank account and NPCI) ಜೋಡಣೆ ಮಾಡಿಸಿ (ಆಧಾರ್ ನಲ್ಲಿರುವ ಹೆಸರು ಮತ್ತು ವಿದ್ಯಾರ್ಥಿವೇತನಕ್ಕೆ ಸಲ್ಲಿಸುವ ಹೆಸರು ಒಂದೇ ರೀತಿ ಇರಬೇಕು) ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ,. ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು –ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲು ಸೂಕ್ತ ಕ್ರಮ ಕೂಗೊಳ್ಳಲಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ-1ರವರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ-560 064 ಅಥವಾ ದೂರವಾಣಿ ಸಂಖ್ಯೆ 080-28461351 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.