ಬಾಗಲಕೋಟೆ: ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯಕ ಯೋಜನೆಯ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ 31 ಅರ್ಜಿ ಸಲ್ಲಿಸುವ ಕೊನೆ ದಿನವಾಗಿರುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈಲ್ವೆ ಪ್ರಯಾಣಿಕರೇ ಗಮನಿಸಿ: ಪ್ರಯಾಣದ ವೇಳೇ ಈ ರೀತಿ ಮಾಡಿದ್ರೆ ದಂಡ ವಿಧಿಸಲಾಗುತ್ತದೆ
ನಾಳೆ ಕೃಷಿಯಲ್ಲಿ ಸಸ್ಯಮೂಲ ಕೀಟನಾಶಕ ಬಳಕೆ ಕುರಿತು ತರಬೇತಿ
ಬಾಗಲಕೋಟೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ರೈತರ ಅನುಕೂಲಕ್ಕಾಗಿ ನವೆಂಬರ 3 ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಗೂಗಲ್ ಮೀಟ್ ಮೂಲಕ ಸಾವಯವ ಕೃಷಿಯಲ್ಲಿ ಸಸ್ಯಮೂಲ ಕೀಟನಾಶಕಗಳ ಬಳಕೆ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಂಡವಾಳ ಹೂಡಿಕೆಗಳ ಒಪ್ಫಂದಗಳು ಕಾರ್ಯಗತಗೊಳ್ಳಲು ಸರ್ಕಾರ ಎಲ್ಲ ಸಹಕಾರ – ಸಿಎಂ ಬೊಮ್ಮಾಯಿ
ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ರೈತರು https://meet.google.com/ttx-zgdr-wow ಗೂಗಲ್ ಮೀಟ್ ಲಿಂಕ್ನ್ನು ಒತ್ತಿ ತರಬೇತಿಗೆ ಹಾಜರಾಗುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.