ಬೆಂಗಳೂರು : 2023-24 ನೇ ಸಾಲಿನ ಪ್ರಥಮ ಪಿಯುಸಿ ಪೂರಕ ಪರೀಕ್ಷೆಯನ್ನು ಉಪನಿರ್ದೇಶಕರ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ನಡೆಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.
ಪ್ರಥಮ ಪಿಯುಸಿ ವಾರ್ಷಿಕ/ಪೂರಕ ಪರೀಕ್ಷೆಯನ್ನು ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಉಪನಿರ್ದೇಶಕರು (ಪದವಿ ಪೂರ್ವ) ಅವರ ನೇತೃತ್ವದಲ್ಲಿ ಪ್ರತಿ ವರ್ಷ ನಡೆಸಲಾಗುತ್ತಿದೆ. ಪ್ರಸಕ್ತ 2023-24ನೇ ಶೈಕ್ಷಣಿಕ ಸಾಲಿನಲ್ಲಿಯೂ ಸಹ ಪ್ರಥಮ ಪಿಯುಸಿ ಪೂರಕ ಪರೀಕ್ಷೆಯನ್ನು 2024ರ ಮೇ ತಿಂಗಳಿನಲ್ಲಿ ನಡೆಸುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಉಪನಿರ್ದೇಶಕರದ್ದಾಗಿರುತ್ತದೆ. ಪರೀಕ್ಷಾ ಕಾರ್ಯಗಳ ನಿರ್ವಹಣೆಯಲ್ಲಿ ಉಪನಿರ್ದೇಶಕರು ಈ ಕೆಳಗಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.
ದಿನಾಂಕ: 30-03-2024 ರಂದು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಅನುತ್ತೀರ್ಣ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು ಅನುಕೂಲವಾಗುವಂತೆ ಕಾಲೇಜುಗಳ ಸೂಚನಾ ಫಲಕದಲ್ಲಿ ಪೂರಕ ಪರೀಕ್ಷೆಯ ವಿವರಗಳನ್ನು ಪ್ರಕಟಿಸುವಂತೆ ಜಿಲ್ಲಾ ಉಪನಿರ್ದೇಶಕರುಗಳು ತಮ್ಮ ಜಿಲ್ಲಾ ವ್ಯಾಪ್ತಿಯ ಪ್ರಾಂಶುಪಾಲರಿಗೆ ಸೂಚಿಸುವುದು. ಅನುತ್ತೀರ್ಣರಾಗಿರುವ ಈ ಹಿಂದಿನ ಎಲ್ಲಾ ಸಾಲಿನ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು 20-04-2024 ಕೊನೆಯ ದಿನಾಂಕವಾಗಿರುತ್ತದೆ. ಪೂರಕ ಪರೀಕ್ಷೆಗಳಿಗೆ ಶುಲ್ಕವನ್ನು ಮಂಡಲಿಯ ನಿಯಮಾನುಸಾರ ಪಡೆಯುವುದು. ಪೂರಕ ಪರೀಕ್ಷೆಯು ದಿನಾಂಕ:20- 05-2024 80 31-05-2024 ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿ ಅಗತ್ಯ ಕ್ರಮ ವಹಿಸುವುದು. (ಪೂರಕ ಪರೀಕ್ಷಾ ವೇಳಾಪಟ್ಟಿಯನ್ನು ಇದರೊಂದಿಗೆ ಲಗತ್ತಿಸಿದೆ) ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ಪೂರಕ ಪರೀಕ್ಷೆಯನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾರ್ಗಸೂಚಿಯಂತೆ ನಡೆಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ: 06-06-2024 ರಂದು ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ಇಲ್ಲಿದೆ 2023-24 ನೇ ಸಾಲಿನ ಪ್ರಥಮ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ