ಪ್ರಸಕ್ತ (2024-25) ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಇಲಾಖಾ ವೆಬ್‍ಸೈಟ್: www.sw.kar.nic.in ನ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್‍ನಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ಅರ್ಜಿ ನಮೂನೆ (ದೃಢೀಕರಣ), ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ (ದೃಢೀಕರಣ), ಜಾತಿ ದೃಢೀಕರಣ ಪ್ರಮಾಣ ಪತ್ರ (ದೃಢೀಕರಣ), ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ(ದೃಢೀಕರಣ) ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ(ದೃಢೀಕರಣ) ದಾಖಲಾತಿಗಳನ್ನು ಸಲ್ಲಿಸಬೇಕು. ಅಗತ್ಯ ದಾಖಲಾತಿಗಳನ್ನು ಲಗತ್ತಿಸದೇ ಇರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ 08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ- 08276-281115 ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ- 08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.