ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪಿಜಿ ಸಿಇಟಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಮತ್ತೆ ಮೂರು ದಿನ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಕುರಿತಂತೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು ಎಂ.ಬಿಎ, ಎಂಸಿಎ, ಎಂ.ಟೆಕ್ ಸೇರಿದಂತೆ ಪಿಜಿ ಕೋರ್ಸ್ ದಾಖಲಾತಿಗೆ ಸಂಬಂಧಿಸಿದಂತೆ ಸಿಇಟಿಗೆ ಅರ್ಜಿ ಸಲ್ಲಿಕೆಗಾಗಿ ದಿನಾಂಕ ವಿಸ್ತರಣೆ ಮಾಡಿರುವುದಾಗಿ ತಿಳಿಸಿದ್ದಾರೆ.

ಪಿಜಿ ಸಿಇಟಿಗಾಗಿ ಜೂನ್.17ರ ಇಂದಿಗೆ ಕೊನೆಯ ದಿನಾಂಕ ನಿಗದಿ ಪಡಿಸಲಾಗಿತ್ತು. ಈಗ ಈ ದಿನಾಂಕವನ್ನು ಜೂನ್.21ರವರೆಗೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದ್ದಾರೆ.

ಇನ್ನೂ ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವಂತ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕೆಇಎ ವೆಬ್ ಸೈಟ್ ಗೆ ಭೇಟಿ ನೀಡಿ, ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದೆ.

Share.
Exit mobile version