ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. 2024-25 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ಮೇ 29 ರಿಂದ ಆನ್‍ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ಜೂನ್ 1 ರಿಂದ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು.

2024-25ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಆನ್‍ಲೈನ್ ಅರ್ಜಿಯು ಸೇವಾಸಿಂಧು ಪೆÇೀರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ಪಾಸುಗಳನ್ನು ಬೆಳಿಗ್ಗೆ 08 ಗಂಟೆಯಿಂದ ಸಂಜೆ 06.30 ಗಂಟೆಯವರೆಗೆ ವಾರದ ಎಲ್ಲಾ ದಿನಗಳಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕೆಂಪೇಗೌಡ ಬಸ್‍ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಆನೇಕಲ್ ಬಸ್ ನಿಲ್ದಾಣದಲ್ಲಿ ವಿತರಿಸಲಾಗುವುದು.
ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ್ದು, ಅದರಂತೆ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರು ಉಚಿತ ಪ್ರಯಾಣ ಸೌಲಭ್ಯ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ – 08022483777 ಗೆ ಸಂಪರ್ಕಿಸಬಹುದಾಗಿದೆ ಹಾಗೂ ಸಂಸ್ಥೆಯ ಜಾಲತಾಣದ ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share.
Exit mobile version