ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2 ರ ವಿಷಯವಾರು ಕೀ ಉತ್ತರಗಳನ್ನು ಮಂಡಲಿಯ ಜಾಲತಾಣದಲ್ಲಿ https://kseab.karnataka.gov.inನಲ್ಲಿ ಪ್ರಕಟಿಸಿದೆ.
https://kseab.karnataka.gov.in ಲಿಂಕನ್ನು ಬಳಸಿ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರ ಕೀ ಉತ್ತರಗಳನ್ನು ಅವಲೋಕಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಮಾಡಲಾಗಿದೆ. ಸದರಿ ಮಾಹಿತಿಯನ್ನು ತಮ್ಮ ಜಿಲ್ಲೆಯಲ್ಲಿ ಪ್ರಚುರಪಡಿಸಿ ವಿದ್ಯಾರ್ಥಿಗಳು/ಶಿಕ್ಷಕರಿಗೆ ಮಾಹಿತಿಯು ತಿಳಿಯುವಂತೆ ಕ್ರಮ ಕೈಗೊಳ್ಳಲು ತಿಳಿಸಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಮಂಡಲಿಯು ಪರಿಗಣಿಸುವುದಿಲ್ಲ ಎಂದು ಈ ಮೂಲಕ ತಿಳಿಸಿದೆ.
2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವಿಷಯವಾರು ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ. ಕೀ ಉತ್ತರಗಳಿಗೆ ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು ಆಕ್ಷೇಪಣೆಗಳನ್ನು ಜೂ.22ರ ಸಂಜೆ 5.30ರೊಳಗೆ ಮಂಡಳಿಯ kseab.karnataka.gov.in ದಲ್ಲಿ ಸಲ್ಲಿಸುವಂತೆ ಸೂಚಿಸಲಾಗಿದೆ.