ಬೆಂಗಳೂರು : 2025ನೇ ಸಾಲಿನ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ದಿನಾಂಕವನ್ನು ವಿಸ್ತರಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
2025-26ನೇ ಶೈಕ್ಷಣಿಕ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವೇಳಾಪಟ್ಟಿಯ ಮಾರ್ಗಸೂಚಿಯನ್ನು ಉಲ್ಲೇಖ-1 ರಲ್ಲಿ ಈಗಾಗಲೇ ಬಿಡುಗಡೆಮಾಡಲಾಗಿದ್ದು, ಅದರಂತೆ ದಾಖಲಾತಿಗಳು ಪ್ರಾರಂಭವಾಗಿದ್ದು, ಉಲ್ಲೇಖ-2, 3, 5, 7,9811ರಲ್ಲಿ ಪ್ರಥಮ ಪಿಯುಸಿ ದಾಖಲಾತಿಗೆ ದಿನಾಂಕವನ್ನು ವಿಸ್ತರಿಸಲಾಗಿತ್ತು, ಪ್ರಸ್ತುತ ವಿದ್ಯಾರ್ಥಿಗಳು ಇನ್ನೂ ದಾಖಲಾತಿ ಬಯಸಿ ಬರುತ್ತಿರುವುದರಿಂದ ಪ್ರಥಮ ಪಿಯುಸಿ ದಾಖಲಾತಿ ದಿನಾಂಕವನ್ನು ಮಾತ್ರ ವಿಶೇಷ ದಂಡಶುಲ್ಕ (670+2220) ಒಟ್ಟು ರೂ.2890/- ದೊಂದಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಂಡು ಶೇಕಡ. 75ರಷ್ಟು ಹಾಜರಾತಿಯನ್ನು ಪಡೆಯುವ ಷರತ್ತಿಗೆ ಒಳಪಟ್ಟು ದಾಖಲಾತಿ ದಿನಾಂಕವನ್ನು ದಿನಾಂಕ:22.08.2025ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ದಾಖಲಾತಿ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ.