ಶಿವಮೊಗ್ಗ: ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ನೀಡದಿದ್ದಕ್ಕೆ ಉಪನ್ಯಾಸಕರ ಮೇಲೆ ವಿದ್ಯಾರ್ಥಿ ಹಾಗೂ ಪೋಷಕರು ಹಲ್ಲೆ ನಡೆಸಿದ್ದಂತ ಘಟನೆ ಸಾಗರದ ಸರ್ಕಾರಿ ಪ್ರಥಮದ ದರ್ಜೆ ಕಾಲೇಜಿನಲ್ಲಿ ನಡೆದಿತ್ತು. ಈ ಘಟನೆಯನ್ನು ಖಂಡಿಸಿ, ಉಪನ್ಯಾಸಕರಿಗೆ ಬೆಂಬಲ ಸೂಚಿಸಿ ನಾಳೆ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆಗೆ ನಿರ್ಧರಿಸಲಾಗಿದೆ.
ಈ ಸಂಬಂಧ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಒಕ್ಕೂಟದಿಂದ ಪೊಲೀಸರಿಗೆ ನಾಳೆ ಪ್ರತಿಭಟನೆಗೆ ಅವಕಾಶ ನೀಡುವಂತೆ ನಗರ ಪೊಲೀಸ್ ಠಾಣೆಗೆ ಮನವಿ ಪತ್ರವನ್ನು ಸಲ್ಲಿಸಿದೆ.
ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಒಕ್ಕೂಟ ಸಲ್ಲಿಸಿರುವಂತ ಮನವಿಯಲ್ಲಿ ದಿನಾಂಕ 21-12-2024ರಂದು ಕಾಲೇಜಿನ ಅವಧಿಯಲ್ಲಿ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಹೊಂದಿರುವ, ಕಾಲೇಜಿನಲ್ಲಿ ಒಳ್ಳೆಯ ಹೆಸರಿರುವಂತ ಇತಿಹಾಸ ಉಪನ್ಯಾಸಕ ರಾಜು ಮೇಲೆ ಹಲ್ಲೆಯಾಗಿದೆ. ಇತಿಹಾಸ ವಿಭಾಗದ ಮುಖ್ಯಸ್ಥರಾದಂತ ರಾಜು ಮೇಲೆ ಕಾಲೇಜಿನ ವಿದ್ಯಾರ್ಥಿ ಹಾಗೂ ಆತನ ತಂದೆ ಸೇರಿ ಹಲ್ಲೆ ಮಾಡಿರುವುದು ಖಂಡನೀಯ ಎಂದಿದ್ದಾರೆ.
ಈ ಘಟನೆಯ ಬಳಿಕ ಹಲ್ಲೆ ಮಾಡಿದಂತ ವಿದ್ಯಾರ್ಥಿ, ಪೋಷಕರು ಕಾಲೇಜು ಮತ್ತು ಇತರೆ ಉಪನ್ಯಾಸಕರ ಬಗ್ಗೆ ತಪ್ಪು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಉಪನ್ಯಾಸಕರ ಮೇಲಿನ ಹಲ್ಲೆ ಹಾಗೂ ತಪ್ಪು ಹೇಳಿಕೆ ನೀಡುತ್ತಿರುವುದನ್ನು ಖಂಡಿಸಿ ನಾಳೆ ಬೆಳಿಗ್ಗೆ 10.30ಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿ ಒಕ್ಕೂಟದಿಂದ ಧರಣಿ, ಪ್ರತಿಭಟನೆ ನೀಡುವುದಾಗಿ ತಿಳಿಸಿದ್ದಾರೆ.
ಇನ್ನೂ ನಾಳಿನ ಧರಣಿ, ಪ್ರತಿಭಟನೆಗೆ ಅವಕಾಶ ನೀಡುವಂತೆ ಸಾಗರ ನಗರ ಠಾಣೆಯ ಪೊಲೀಸರನ್ನು ವಿದ್ಯಾರ್ಥಿ ಒಕ್ಕೂಟ ಕೋರಿದ್ದು, ಇದಕ್ಕೆ ಪೊಲೀಸ್ ಇಲಾಖೆಯಿಂದ ಅನುಮತಿಸಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ನಾಳೆ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಳಿ ವಿದ್ಯಾರ್ಥಿ ಒಕ್ಕೂಟದಿಂದ ಉಪನ್ಯಾಸಕರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನೆಡಸಲಾಗುತ್ತಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
1000 VA ಹುದ್ದೆಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ಜ.7ರಿಂದ ಜಿಲ್ಲಾ ಹಂತದಲ್ಲಿ ಮೂಲ ದಾಖಲೆಗಳ ಪರಿಶೀಲನೆ ಆರಂಭ
ಧಾರವಾಡ: ಡಿ.23ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut