ಹೈದ್ರಬಾದ್‌: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಕೇಸರಿ ಉಡುಪನ್ನು ಧರಿಸಿದ್ದಕ್ಕೆ ಶಿಕ್ಷಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಧಾರ್ಮಿಕ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿ ಶಾಲೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.ಇದೇ ವೇಳೇ ಪ್ರತಿಭಟನ ಕಾರರು ಮದರ್ ತೆರೇಸಾ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳನ್ನು ತರಗತಿಗೆ ಪ್ರವೇಶಿಸಲು ಅನುಮತಿಸಲಿಲ್ಲ ಎಂದು ಆರೋಪಿಸಲಾಗಿದೆ. 

ಆದಾಗ್ಯೂ, ಶಾಲಾ ಸಮವಸ್ತ್ರವನ್ನು ಧರಿಸದಿರುವುದನ್ನು ಗಮನಿಸಿದ ನಂತರವೇ ಪ್ರಾಂಶುಪಾಲರು ತಮ್ಮ ಪೋಷಕರನ್ನು ಕರೆತರುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದರು ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ವಿದ್ಯಾರ್ಥಿಗಳ ಪೋಷಕರು ನೀಡಿದ ದೂರಿನ ನಂತರ, ಶಾಲಾ ಮುಖ್ಯಸ್ಥರು ಮತ್ತು ಪ್ರಾಂಶುಪಾಲರ ವಿರುದ್ಧ ಸೆಕ್ಷನ್ 153 (ಎ) (ಧರ್ಮ ಅಥವಾ ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 (ಎ) (ಧಾರ್ಮಿಕ ಭಾವನೆಗಳನ್ನು ಅವಮಾನಿಸುವುದು) ಅಡಿಯಲ್ಲಿ ಬುಧವಾರ ಪ್ರಕರಣ ದಾಖಲಿಸಲಾಗಿದೆ. ಶಾಲಾ ಆಡಳಿತ ಮಂಡಳಿ ಕೂಡ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ.

 

Share.
Exit mobile version