ಮಂಗಳೂರು : ಕಾಲೇಜು ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ಐಟಂ ಸಾಂಗ್ ಗೆ ಡ್ಯಾನ್ಸ್ ಮಾಡಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ಮಂಗಳೂರಿನ ಸೇಂಟ್ ಜೋಸೆಫ್ ಇಂಜಿನೀಯರಿಂಗ್ ಕಾಲೇಜಿನಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ವಿದ್ಯಾರ್ಥಿಗಳ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ಇದರ ಬಗ್ಗೆ ವಿಚಾರಣೆ ನಡೆಯುವವರೆಗೂ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.ವಿಚಾರಣೆ ಹಿನ್ನೆಲೆ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ ಎಂದು ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ. ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ವಿದ್ಯಾರ್ಥಿಗಳ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆ, ಆಕ್ರೋಶಕ್ಕೆ ಕಾರಣವಾಗಿತ್ತು.