ಸಿದ್ದಾಪುರ : ಕ್ಷೀರಭಾಗ್ಯ ಯೋಜನೆಯಡಿ ವಿತರಿಸಿದ ಹಾಲು ಕುಡಿದ ಮಕ್ಕಳು ಅಸ್ವಸ್ಥಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಕ್ಯಾದಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಎಂದಿನಂತೆ ಇಂದು ಕ್ಷೀರಭಾಗ್ಯ ಯೋಜನೆಯಡಿ ವಿತರಿಸಿದ ಹಾಲು ಸೇವಿಸಿದ ಮಕ್ಕಳಿಗೆ ವಾಂತಿ , ಹೊಟ್ಟೆ ನೋವು ಕಾಣಿಸಿಕೊಂಡಿದ್ದು, 11 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಒಟ್ಟು 27 ಮಂದಿ ವಿದ್ಯಾರ್ಥಿಗಳು ಆಸ್ಪತ್ರೆಗೆ ಬಂದಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕ್ಯಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್ದು, ಆಸ್ಪತ್ರೆಗೆ ಬಂದಿದ್ದ 27 ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಧೃಡೀಕರಿಸಿದ ಬಳಿಕ ಮಕ್ಕಳನ್ನು ಮನೆಗೆ ಕಳುಹಿಸಿಕೊಡಲಾಗಿದೆ.
BIGG UPDATE : ಪೊಲೀಸ್ ಸರ್ಪಗಾವಲಿನಲ್ಲಿ ಇಂದು 3 ಗೋರಿ ತೆರವು ಕಾರ್ಯಾಚರಣೆ |Hubballi Dargah
‘ಸಂಜಯ್ ರಾವುತ್ ಬಾಲಿಶ ಹೇಳಿಕೆ ನೀಡಿದ್ದಾರೆ’ : ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು