ಮುಂಬೈ: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ಟ್ರೇಲರ್ ಮತ್ತು ಹಾಡುಗಳಿಂದಲೇ ಸಿಕ್ಕಾಪಟ್ಟೆ ಕ್ರೇಜ್ ಹೆಚ್ಚಿಸಿದೆ. ಈಸಿನಿಮಾ ಮುಂದಿನ ತಿಂಗಳು ೨೮ ಕ್ಕೆ ರಿಲೀಸ್ ಆಗುತ್ತಿದೆ. ಹೀಗಾಗಿ ಚಿತ್ರತಂಡ ಭರ್ಜರಿ ಸಿನಿಮಾ ಪ್ರಚಾರದಲ್ಲಿ ತೊಡಗಿಕೊಂಡಿದೆ.
health tips: ಈ ರೀತಿ ಸಲಾಡ್ ಮಾಡಿ ತಿನ್ನದರೆ ಏನು ಆಗುತ್ತೆ ಗೊತ್ತಾ?| salad benifit
ನಿನ್ನೆ ಬೆಂಗಳೂರಿನಲ್ಲಿ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ ಹವಾ ಕ್ರಿಯೇಟ್ ಮಾಡಿತ್ತು. ಇದೀಗ ಸದ್ಯ ಚಿತ್ರತಂಡ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಲ್ಲಿ ವಿಶೇಷ ರೀತಿಯಲ್ಲಿ ಚಿತ್ರತಂಡ ಪ್ರಚಾರ ಮಾಡುತ್ತಿದೆ. ಒಂದೇ ವೇದಿಕೆಯಲ್ಲಿ ಸುದೀಪ್ ಮತ್ತು ಜಾಕ್ವಲಿನ್ ಫರ್ನಾಂಡಿಸ್ ಕಾಣಿಸಿಕೊಂಡಿದ್ದಾರೆ. ಈ ವೇಳೆ ರಾ ರಾ ಎಂಬ ರಕ್ಕಮ್ಮ ಹಾಡಿಗೆ ಇಬ್ಬರು ಸಖತ್ ಸ್ಟೆಪ್ಸ್ ಹಾಕಿದ್ದರು. ಅವರಿಬ್ಬರ ಹೆಜ್ಜೆಗೆ ಬಾಲಿವುಡ್ ತಾರೆಯರು ಫುಲ್ ಫೀದಾ ಆಗಿದ್ದಾರೆ.
health tips: ಈ ರೀತಿ ಸಲಾಡ್ ಮಾಡಿ ತಿನ್ನದರೆ ಏನು ಆಗುತ್ತೆ ಗೊತ್ತಾ?| salad benifit
ಇಂದು ಸಂಜೆ 5.02 ನಿಮಿಷಕ್ಕೆ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಟ್ರೈಲರ್ ರಿಲೀಸ್ ಆಗುತ್ತಿದ್ದು, ಹಿಂದಿಯಲ್ಲಿ ಸಲ್ಮಾನ್ ಖಾನ್, ತಮಿಳಿನಲ್ಲಿ ಧನುಷ್, ತೆಲುಗಿನಲ್ಲಿ ರಾಮ್ ಚರಣ್ ತೇಜ್, ಮಲಯಾಳಂನಲ್ಲಿ ದುಲ್ಕರ್ ಸಲ್ಮಾನ್ ಬಿಡುಗಡೆ ಮಾಡುತ್ತಿದ್ದಾರೆ.ಈ ಚಿತ್ರಕ್ಕೆ ಜಾಕ್ ಮಂಜು ನಿರ್ಮಾಣ ಮಾಡಿದ್ದು, ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಹೀಗಾಗಿ ಕಿಚ್ಚ ಸುದೀಪ್ ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.