ಮೈಸೂರು: ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಬಗ್ಗೆ ಯಾವುದೇ ಆತಂಕವಿಲ್ಲ, ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಒಮಿಕ್ರಾನ್ ಭೀತಿ ಹಿನ್ನೆಲೆ ಈ ಬೆನ್ನಲ್ಲೆ ಮೈಸೂರಿನಲ್ಲಿ ಮಾತಾನಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸದ್ಯಕ್ಕೆ ಓಮಿಕ್ರಾನ್ (Omicron) ಆತಂಕ ಇಲ್ಲ, ನಮ್ಮಲ್ಲಿ ಓಮಿಕ್ರಾನ್ ರೂಪಾಂತರ ಪತ್ತೆಯಾಗಿಲ್ಲ ಎಂದರು. ಅಮೆರಿಕಾದಲ್ಲಿ ತೀವ್ರತರವಾದ ಕೇಸ್ಗಳು ಕಂಡುಬಂದಿವೆ. ಮಹಾರಾಷ್ಟ್ರದಲ್ಲಿ ಒಂದು ಕೇಸ್ ಪತ್ತೆಯಾಗಿದೆ. ನಮ್ಮಲ್ಲಿ ಕೇಸ್ ಪತ್ತೆಯಾಗಿಲ್ಲ, ಆದರೂ ಗಡಿ ಜಿಲ್ಲೆಗಳಿಗೆ ವಿಸ್ತೃತವಾದ ಮಾರ್ಗಸೂಚಿ ನೀಡಿದ್ದೇವೆ ಎಂದು ಅವರು ತಿಳಿಸಿದರು.
ನಮ್ಮ ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಹೊಸ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ (Health Department) ಅಲರ್ಟ್ ಆಗಿದ್ದು ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಸೂಚಿಸಿದೆ. ಗುಂಪು ಸೇರುವಿಕೆಯಿಂದ ದೂರ ಇರುವುದು, ಮೂರನೇ ಡೋಸ್ ಲಸಿಕೆ ಪಡೆಯುವುದ ಹಾಗೂ ಮಾಸ್ಕ್ ಧರಿಸುವುದು ಸೇರಿಂತೆ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಸಲಹೆ ನೀಡಿದೆ.
ಎರಡು ದಿನಗಳ ಹಿಂದಷ್ಟೇ ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡುವ ಮೂಲಕ ಸಲಹಾ ಪತ್ರವನ್ನು ಹಂಚಿಕೊಂಡಿದ್ದರು.ಸದ್ಯ ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ರೂಪಾಂತರಿ ಆತಂಕ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಮಾತನಾಡಿ ಜನತೆ ಮೂರನೇ ಡೋಸ್ ಹಾಕಿಸಿಕೊಳ್ಳಲು ಮನವಿ ಮಾಡಿದ್ದಾರೆ. ಯಾವುದೇ ಆತಂಕವಿಲ್ಲ, ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಒಂದು ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆ ಗಡಿ ಜಿಲ್ಲೆಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಕಟ್ಟೆಚ್ಚರ ವಹಿಸುವಂತೆ ಗಡಿ ಜಿಲ್ಲೆಯ ಡಿಸಿಗಳಿಗೆ ಸೂಚಿಸಲಾಗಿದೆ ಎಂದರು.
ಬಿಜೆಪಿ ದೆಹಲಿಗೆ ಕಸದ ಬೆಟ್ಟ ಬಿಟ್ಟರೆ, ಬೇರೇನನ್ನೂ ನೀಡಿಲ್ಲ : ಗಾಜಿಪುರದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ವಾಗ್ದಾಳಿ