Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಪರಮಾಣು ಮುಕ್ತ ಜಗತ್ತಿಗೆ ಬಲವಾದ ಗೋಡೆ’: ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಭರವಸೆ!

ಕಡುವೈರಿಗಳ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಆಕಾಶದಲ್ಲೇ ಹೊಡೆದುರುಳಿಸುವ ಬಲಿಷ್ಠ ತಂತ್ರಜ್ಞಾನ ಪ್ರದರ್ಶಿಸಿದ ಡಿಆರ್‌ಡಿಒ!

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಕಬ್ಬಿನ ಬಾಕಿ ಪಾವತಿ ಶೂನ್ಯ: MLC ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಉತ್ತರ
KARNATAKA

ರೈತರಿಗೆ ಕಬ್ಬಿನ ಬಾಕಿ ಪಾವತಿ ಶೂನ್ಯ: MLC ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಉತ್ತರ

By ವಸಂತ ಬಿ ಈಶ್ವರಗೆರೆ

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದಲ್ಲಿ ಒಟ್ಟು 98 ಸಕ್ಕರೆ ಕಾರ್ಖಾನೆಗಳು ಅಸ್ತಿತ್ವದಲ್ಲಿದ್ದು, ಇವುಗಳಲ್ಲಿ ಪ್ರಸ್ತುತ 81 ಕಾರ್ಖಾನೆಗಳು ಕಾರ್ಯನಿರತವಾಗಿವೆ. ಅಲ್ಲದೆ, ಕಬ್ಬು ಸರಬರಾಜು ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ಯಾವುದೇ ರೀತಿಯ ಕಬ್ಬಿನ ದರ ಬಾಕಿ ಉಳಿದಿಲ್ಲ. ಇನ್ನು 2024-25ನೇ ಸಾಲಿನಲ್ಲಿ 521.61 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯಲಾಗಿದೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಶಾಸಕರಾದ ದಿನೇಶ್‌ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ (2022-23, 2023-24 ಮತ್ತು 2024-25ರ) ಕಾರ್ಖಾನೆಗಳಿಗೆ ಸರಬರಾಜು ಮಾಡಿದ ಕಬ್ಬಿನ ಸಂಪೂರ್ಣ ಮೊತ್ತವನ್ನು ರೈತರಿಗೆ ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.

3 ವರ್ಷಗಳಲ್ಲಿ ಕಬ್ಬು ಅರೆದಿರುವ ವಿವರ

ಕಾರ್ಖಾನೆಗಳಲ್ಲಿ ಅರೆಯಲಾದ ಕಬ್ಬಿನ ಪ್ರಮಾಣ: ಲಕ್ಷ ಮೆಟ್ರಿಕ್ ಟನ್‌ಗಳಲ್ಲಿ ವಿವರ
• 2022-23: ಒಟ್ಟು 603.55 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯಲಾಗಿದೆ
– ಇದರಲ್ಲಿ ಪಾವತಿಸಿದ ಮೊತ್ತ: 20138.93 ಕೋಟಿ ರೂ.
• 2023-24: ಒಟ್ಟು 585.08 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯಲಾಗಿದೆ
• ಇದರಲ್ಲಿ ಪಾವತಿಸಿದ ಮೊತ್ತ: 20645.91 ಕೋಟಿ ರೂ.
• 2024-25: ಒಟ್ಟು 521.61 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯಲಾಗಿದೆ.
• ಇದರಲ್ಲಿ ಪಾವತಿಸಿದ ಮೊತ್ತ: 19569.15 ಕೋಟಿ ರೂ.

ರಾಜ್ಯ ಸರ್ಕಾರವು ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಮಹತ್ವದ ನಿರ್ಧಾರಗಳನ್ನು ಕೈಗೊಂಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಪ್ರತಿನಿಧಿಗಳ ನಡುವಿನ ಸಭೆಯಲ್ಲಿ ತೀರ್ಮಾನಿಸಿದಂತೆ ನವೆಂಬರ್ 8ರಂದು ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿತ್ತು. ಈ ಆದೇಶದ ಪ್ರಕಾರ, ಕನಿಷ್ಠ ಹೆಚ್ಚುವರಿ ಕಬ್ಬು ಬೆಲೆಯನ್ನು ನಿಗದಿಪಡಿಸಲಾಗಿತ್ತು. 9.5% ಅಥವಾ ಕಡಿಮೆ ಸಕ್ಕರೆ ಇಳುವರಿ ದರ ಇರುವ ಕಬ್ಬಿಗೆ ಪ್ರತಿ ಟನ್‌ಗೆ ಕಾರ್ಖಾನೆ ಮತ್ತು ರಾಜ್ಯ ಸರ್ಕಾರದಿಂದ ತಲಾ ₹50 ರಂತೆ ಒಟ್ಟು ₹100 ಹೆಚ್ಚುವರಿ ಬೆಲೆಯನ್ನು ಘೋಷಿಸಲಾಯಿತು. ಅದೇ ರೀತಿ, 10.25% ಇಳುವರಿ ದರಕ್ಕೆ, ಕಟಾವು ಮತ್ತು ಸಾಗಾಟ ವೆಚ್ಚ ಹೊರತುಪಡಿಸಿ, ಪ್ರತಿ ಟನ್‌ಗೆ ಒಟ್ಟು ₹3,200 ದರ ನಿಗದಿಪಡಿಸಲಾಗಿತ್ತು. ಒಟ್ಟಾರೆಯಾಗಿ ರೈತರಿಗೆ ₹3300 ದೊರೆಯುವಂತೆ ದರ ನಿಗದಿಪಡಿಸಲಾಗಿತ್ತು.

Share. Facebook Twitter LinkedIn WhatsApp Email

Related Posts

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

1 Min Read

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

1 Min Read

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

2 Mins Read
Recent News

​’ಪರಮಾಣು ಮುಕ್ತ ಜಗತ್ತಿಗೆ ಬಲವಾದ ಗೋಡೆ’: ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಭರವಸೆ!

ಕಡುವೈರಿಗಳ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಆಕಾಶದಲ್ಲೇ ಹೊಡೆದುರುಳಿಸುವ ಬಲಿಷ್ಠ ತಂತ್ರಜ್ಞಾನ ಪ್ರದರ್ಶಿಸಿದ ಡಿಆರ್‌ಡಿಒ!

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

State News
KARNATAKA

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

By kannadanewsnow57 KARNATAKA 1 Min Read

ಬೆಂಗಳೂರು: 2026-27ನೇ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ನಿಗದಿತ ಅವಧಿಯೊಳಗೆ ಪಾವತಿಸುವ ಸಾರ್ವಜನಿಕರಿಗೆ ಸರ್ಕಾರವು ವಿಶೇಷ ರಿಯಾಯಿತಿಯೊಂದನ್ನು ಘೋಷಿಸಿದೆ. ತೆರಿಗೆದಾರರು…

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

SHOCKING : ದಿನಕ್ಕೆ 3-4 ಬಾಟಲಿ ‘ಸ್ಟಿಂಗ್ ಜ್ಯೂಸ್’ ಕುಡಿಯುತ್ತಿದ್ದ ಯುವಕ ಕಿಡ್ನಿ ಫೇಲಾಗಿ ಸಾವು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.