ಬೆಂಗಳೂರು: ಕಬ್ಬಿಗೆ ದರ 5,500 ದರ ನಿಗದಿ ಮಾಡುವಂತೆ ಆಗ್ರಹಿಸಿ ಇಂದು ಕಬ್ಬು ಬೆಳೆಗಾರರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ.
ಇಂದು ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಹೆದ್ದಾರಿಗಳನ್ನು ತಡೆಯಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಸರ್ಕಾರ ಈ ಪ್ರತಿಭಟನೆ ಜಗ್ಗದೇ ಹೋದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ರಾಜ್ಯ ಕಬ್ಬು ಬೆಳೆಗಾರರದ್ದಾಗಿದೆ. ರಾಜ್ಯದ ಮೂವತ್ತು ಲಕ್ಷ ಕಬ್ಬು ಬೆಳೆಗಾರರ ಪರವಾಗಿ ಹೋರಾಟ ನಡೆಯುತ್ತಿದೆ. ಸರ್ಕಾರ ಇಲ್ಲಿಯವರೆಗೆ ಯಾವುದೇ ತೀರ್ಮಾನ ಕೈಗೊಳ್ಳದೆ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ಕಬ್ಬಿನ ಬೆಲೆ ಏರಿಕೆ ಮಾಡಬೇಕೆಂದು ಒತ್ತಾಯಿಸಿ ಹೆದ್ದಾರಿ ಬಂದ್ ನಡೆಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
E-Textil : ಇನ್ಮುಂದೆ ನಿಮ್ಮ ಬಟ್ಟೆ ಮೂಲಕ ಕೂಡ ಆಗಲಿದೆ ಸ್ಮಾರ್ಟ್ ಫೋನ್ ಚಾರ್ಜ್, ಇಲ್ಲಿದೆ ಮಾಹಿತಿ
BIGG NEWS : ವಿವಾದದ ಸುಳಿಯಲ್ಲಿ ಡಾಲಿಯ ‘ಹೆಡ್ ಬುಷ್’ ಚಿತ್ರ : ಇಂದು ವಾಣಿಜ್ಯ ಮಂಡಳಿಯಲ್ಲಿ ಮುಖಾಮುಖಿ ಮಾತುಕತೆ
BIGG NEWS : ಚಳಿಗೆ ಸಿಲಿಕಾನ್ ಸಿಟಿ ಗಢಗಢ : ಬೆಂಗಳೂರಲ್ಲಿ 2 ದಿನ ಹೆಚ್ಚಾಗಲಿದೆ ‘ಚಳಿ’ : ಹವಾಮಾನ ಇಲಾಖೆ ಮುನ್ಸೂಚನೆ