ಹಿಮಾಚಲ ಪ್ರದೇಶ: ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ವರದಿಗಳ ನಂತರ, ಹಿಮಾಚಲ ಮುಖ್ಯಮಂತ್ರಿ, “ನಾನು ಯಾವುದೇ ರಾಜೀನಾಮೆಯನ್ನು ನೀಡಿಲ್ಲ. ನಾನೊಬ್ಬ ಯೋಧ, ಹೋರಾಟ ಮುಂದುವರಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಐದು ವರ್ಷಗಳ ಕಾಲ ಅಧಿಕಾರದಲ್ಲಿರಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆಗೆ ಮುಂದಾದಿದ್ದಾರೆ ಎನ್ನಲಾಗಿತ್ತು. ಅಲ್ಲದೇ ಅವರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನೇ ನೀಡಿದ್ದಾರೆ ಎಂದು ಹೇಳಲಾಗುತ್ತಿತ್ತು.
ಪ್ರಸ್ತುತ ಸರ್ಕಾರವು ಶಾಸಕರನ್ನು ಅವಮಾನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ವಿಕ್ರಮಾದಿತ್ಯ ಸಿಂಗ್ ಅವರು ಸಚಿವ ಸಂಪುಟಕ್ಕೆ ರಾಜೀನಾಮೆ ಘೋಷಿಸಿದ ಕೆಲವೇ ಗಂಟೆಗಳ ನಂತರ, ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬುದಾಗಿ ವರದಿಗಳಿಂದ ತಿಳಿದು ಬಂದಿತ್ತು.
ಪರಿಸ್ಥಿತಿಯ ಉಸ್ತುವಾರಿ ವಹಿಸಲು ಬುಧವಾರ ಶಿಮ್ಲಾಕ್ಕೆ ಧಾವಿಸಿದ ಕಾಂಗ್ರೆಸ್ ವೀಕ್ಷಕರಾದ ಭೂಪಿಂದರ್ ಸಿಂಗ್ ಹೂಡಾ ಮತ್ತು ಡಿ.ಕೆ.ಶಿವಕುಮಾರ್ ಅವರು ಅವರ ರಾಜೀನಾಮೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಜ್ಜಾಗಿದ್ದಾರೆ ಎನ್ನಲಾಗಿತ್ತು.
ಈ ಎಲ್ಲದ ನಡುವೆ ನಾನು ರಾಜೀನಾಮೆಯನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿಲ್ಲ ಎಂಬುದಾಗಿ ಸುಖ್ವಿಂದರ್ ಸಿಂಗ್ ಸುಖು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ನನ್ನ ಹೋರಾಟವನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ : ‘NIA’ ತನಿಖೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ
ಪಾಕಿಸ್ತಾನ ಪರ ಘೋಷಣೆ ಆರೋಪ : ತುಮಕೂರಲ್ಲಿ ‘ಬಿಜೆಪಿ ಕಾರ್ಯಕರ್ತರ’ ಪ್ರತಿಭಟನೆ ವೇಳೆ ‘Dysp’ ಮೇಲೆ ಹಲ್ಲೆ