Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಜಿ ಕರೆದರೆ ನಾನು ಅರ್ಜಿ ಹಾಕಬಹುದು : ಸಿಎಂ ಕನಸು ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್

18/04/2026 9:53 AM

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ: ರಷ್ಯಾ ತೈಲ ಮಾರಾಟಕ್ಕೆ ಅಮೆರಿಕದಿಂದ ಮತ್ತೆ ‘ಗ್ರೀನ್ ಸಿಗ್ನಲ್’ : ನಿರ್ಬಂಧಗಳ ವಿನಾಯಿತಿ ವಿಸ್ತರಣೆ !

18/04/2026 9:44 AM

BREAKING: ಮೆಟಾದಲ್ಲಿ ಮತ್ತೆ ಉದ್ಯೋಗ ಕಡಿತದ ಭೀತಿ: ಮೇ 20ಕ್ಕೆ 8,000 ನೌಕರರ ವಜಾ | META Lay offs

18/04/2026 9:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಭ್ರೂಣಲಿಂಗ’ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಸರ್ಕಾರ ವಿಫಲ : ಸಂಸದೆ ಸುಮಲತಾ ಅಂಬರೀಷ್ ಕಿಡಿ
KARNATAKA

‘ಭ್ರೂಣಲಿಂಗ’ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಸರ್ಕಾರ ವಿಫಲ : ಸಂಸದೆ ಸುಮಲತಾ ಅಂಬರೀಷ್ ಕಿಡಿ

By kannadanewsnow0518/05/2024 5:57 PM
sumalatha ambareesh

ಮಂಡ್ಯ : ಕಳೆದ ವರ್ಷ ಇಡೀ ದೇಶವೇ ಬೆಚ್ಚಿ ಬೀಳಿಸುವಂತೆ ಮಂಡ್ಯ ಜಿಲ್ಲೆಯಲ್ಲಿ ಭ್ರೂಣಲಿಂಗ ಹತ್ಯೆ ಪ್ರಕರಣ ನಡೆದಿತ್ತು. ಇದೀಗ ಇತ್ತೀಚಿಗೆ ಪಾಂಡವಪುರದಲ್ಲೂ ಕೂಡ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಒಂದು ಘಟನೆ ಕುರಿತಂತೆ ಮಂಡ್ಯ ಸಂಸದ ಅಂಬರೀಶ್ ರವರು ಸರ್ಕಾರದ ವಿರುದ್ಧ ಕಿಡಿ ಕಾರಿಂದು ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಅಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಮಂಡ್ಯ ಜಿಲ್ಲೆಯ ಹಲವೆಡೆ ಹಲವು ತಿಂಗಳುಗಳ ಹಿಂದೆಯೇ ಬೆಳಕಿಗೆ ಬಂದ ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಹಾಗೂ ತಪ್ಪಿತಸ್ಥರನ್ನು ಶಿಕ್ಷಿಸಲು ರಾಜ್ಯ ಸರ್ಕಾರ ವಿಫಲವಾಗಿರುವುದು ವಿಷಾದನೀಯ ಹಾಗೂ ಖಂಡನೀಯ.

ಹಲವು ಬಾರಿ ಈ ಕುರಿತು ಜಿಲ್ಲಾ ಆರೋಗ್ಯಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ತಂದು ಎಚ್ಚರಿಸಿದ್ದರೂ ಈ ಬಗ್ಗೆ ಅಸಡ್ಡೆ ಯಾಕೆ? ಈ ಕರಾಳ ದಂಧೆ ನಿರ್ಭಯವಾಗಿ ನಡೆಯುತ್ತಿದ್ದರೂ, ಕಾಂಗ್ರೆಸ್ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ಯಾಕೆ ತೋರಿದೆ ಪಾಂಡವಪುರ ಪಟ್ಟಣದ ಸರ್ಕಾರಿ ಕ್ವಾಟ್ರಸ್‌ನಲ್ಲಿ, ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದ ನೀಚ ಕೃತ್ಯ ಕಳವಳಕಾರಿ.

ಈ ಹಿಂದೆಯೇ ಈ ಪ್ರಕರಣಗಳು ಬೆಳಕಿಗೆ ಬಂದಾಗ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಪುನಃ ಇಂತಹ ಪ್ರಕರಣಗಳು ನಡೆಯುತ್ತಿದ್ದವೇ? ಈಗಲಾದರೂ ಈ ದುಷ್ಕೃತ್ಯದಲ್ಲಿ ಶಾಮೀಲಾದ ವೈದ್ಯಾಧಿಕಾರಿಗಳು ಸೇರಿದಂತೆ ಇತರ ತಪ್ಪಿತಸ್ಥರಿಗೆ ಸರ್ಕಾರ ಶಿಕ್ಷೆ ವಿಧಿಸುವುದೇ?

ಭ್ರೂಣ ಲಿಂಗ ಪತ್ತೆಯಿಂದಾಗಿ ಅದೆಷ್ಟೋ ಹೆಣ್ಣು ಶಿಶುಗಳು ಗರ್ಭದಿಂದ ಹೊರಬಂದು, ಹೊರ ಜಗತ್ತನ್ನು ಕಾಣುವ ಮೊದಲೇ ಹತ್ಯೆಯಾಗುತ್ತಿದ್ದಾರೆ. ಓರ್ವ ತಾಯಿಯಾಗಿ ಇಂತಹ ಹೇಯ ಕೃತ್ಯದ ಬಗ್ಗೆ ತಿಳಿದು ನೋವಾಗುತ್ತಿದೆ. ರಾಜ್ಯ ಸರ್ಕಾರ ಈ ರಾಕ್ಷಸ ಪ್ರವೃತ್ತಿಯ ಪ್ರಕರಣಗಳನ್ನು ಲಘುವಾಗಿ ಪರಿಗಣಿಸದೆ ಈ ಕೂಡಲೇ ಅಗತ್ಯ ಕ್ರಮ ಕೈಗೊಂಡು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ, ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸುತ್ತಿದ್ದೇನೆ.

Share. Facebook Twitter LinkedIn WhatsApp Email

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಜಿ ಕರೆದರೆ ನಾನು ಅರ್ಜಿ ಹಾಕಬಹುದು : ಸಿಎಂ ಕನಸು ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್

18/04/2026 9:53 AM1 Min Read

ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ : HD ಕುಮಾರಸ್ವಾಮಿ ಕಿಡಿ

18/04/2026 9:06 AM1 Min Read

BREAKING : ರಾಜ್ಯದ ಜನತೆಗೆ ಕರೆಂಟ್ ಶಾಕ್ : ಪ್ರತಿ ಯುನಿಟ್ ಗೆ 56 ಪೈಸೆ ದರ ಏರಿಕೆ!

18/04/2026 8:58 AM2 Mins Read
Recent News

ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಜಿ ಕರೆದರೆ ನಾನು ಅರ್ಜಿ ಹಾಕಬಹುದು : ಸಿಎಂ ಕನಸು ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್

18/04/2026 9:53 AM

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ: ರಷ್ಯಾ ತೈಲ ಮಾರಾಟಕ್ಕೆ ಅಮೆರಿಕದಿಂದ ಮತ್ತೆ ‘ಗ್ರೀನ್ ಸಿಗ್ನಲ್’ : ನಿರ್ಬಂಧಗಳ ವಿನಾಯಿತಿ ವಿಸ್ತರಣೆ !

18/04/2026 9:44 AM

BREAKING: ಮೆಟಾದಲ್ಲಿ ಮತ್ತೆ ಉದ್ಯೋಗ ಕಡಿತದ ಭೀತಿ: ಮೇ 20ಕ್ಕೆ 8,000 ನೌಕರರ ವಜಾ | META Lay offs

18/04/2026 9:26 AM

ರಾಜ್ಯದಲ್ಲಿ ಸುಡುಬಿಸಿಲಿಗೆ ‘ಕೂಲ್’ ಆದ ಜನರು: ಬಿಯರ್ ಮಾರಾಟದಲ್ಲಿ ಕರ್ನಾಟಕ ಹೊಸ ದಾಖಲೆ!

18/04/2026 9:19 AM
State News
KARNATAKA

ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಜಿ ಕರೆದರೆ ನಾನು ಅರ್ಜಿ ಹಾಕಬಹುದು : ಸಿಎಂ ಕನಸು ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್

By kannadanewsnow0518/04/2026 9:53 AM KARNATAKA 1 Min Read

ಬೆಳಗಾವಿ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸ್ವಲ್ಪ ತಣ್ಣಗಾಗಿತ್ತು ಆದರೆ ಇದೀಗ ಗೃಹ ಸಚಿವ…

ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ : HD ಕುಮಾರಸ್ವಾಮಿ ಕಿಡಿ

18/04/2026 9:06 AM

BREAKING : ರಾಜ್ಯದ ಜನತೆಗೆ ಕರೆಂಟ್ ಶಾಕ್ : ಪ್ರತಿ ಯುನಿಟ್ ಗೆ 56 ಪೈಸೆ ದರ ಏರಿಕೆ!

18/04/2026 8:58 AM

ಮಧ್ಯರಾತ್ರಿ ದ.ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಹೊಸ ಅತಿಥಿಗಳು : ವಿಮಾನ ನಿಲ್ದಾಣಕ್ಕೆ ಬಂದ 4 ಚೀತಾ ಬರಮಾಡಿಕೊಂಡ ಈಶ್ವರ ಖಂಡ್ರೆ

18/04/2026 8:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.